ಮಗಳು ಎರಡೆರಡು ಬಾರಿ ಓಡಿ ಹೋಗಿದ್ದರೂ ಅಂತರ್ಜಾತಿ ಪ್ರೀತಿಗೆ ವಿರೋಧ; ಯುವಕನ ಮೇಲೆ ಹಲ್ಲೆ!

ಮಗಳು ಎರಡೆರಡು ಬಾರಿ ಓಡಿ ಹೋಗಿದ್ದರೂ ಅಂತರ್ಜಾತಿ ಪ್ರೀತಿಗೆ ವಿರೋಧ; ಯುವಕನ ಮೇಲೆ ಹಲ್ಲೆ!

Published : Dec 17, 2024, 05:27 PM IST

ಯಾದಗಿರಿ ಜಿಲ್ಲೆಯಲ್ಲಿ ಅಂತರ್ಜಾತಿ ಪ್ರೇಮಿಗಳಿಗೆ ಕುಟುಂಬದಿಂದಲೇ ವಿರೋಧ ವ್ಯಕ್ತವಾಗಿದೆ. ಯುವತಿಯ ಕುಟುಂಬಸ್ಥರು ಯುವಕನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಬಂದಳ್ಳಿ ಗ್ರಾಮದಲ್ಲಿ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿ (ಡಿ.17): ಭಾರತದ ಪ್ರತಿಯೊಬ್ಬ ಪ್ರಜೆಯೂ ಸಮಾನರು ಎಂಬಂತೆ ಸಮಾತನೆಗಾಗಿ ರಚಿಸಲಾದ ಸಂವಿಧಾನ ಜಾರಿಗೊಂಡು 75 ವರ್ಷಗಳು ಕಳೆದರೂ ಇನ್ನೂ ಸಮಾನತೆ ಎಂಬ ಭಾವನೆಯೇ ಬಂದಿಲ್ಲ. ಇಲ್ಲಿ ಅಂತರ್ಜಾತಿಯ ಯುವಕ-ಯುವತಿ ಪರಸ್ಪರ ಪ್ರೀತಿ ಮಾಡಿದ್ದಕ್ಕೆ ಅವರ ಕುಟುಂಬದಿಂದ ವಿರೋಧ ವ್ಯಕ್ತವಾಗಿದ್ದು, ಜಾತಿನಿಂದನೆ ಮಾಡಿ ಹಲ್ಲೆ ಮಾಡಿರುವ ಘಟನೆ ಹೈದರಾಬಾದ್ ಕರ್ನಾಟಕದ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿಯ ಬಂದಳ್ಳಿ ಗ್ರಾಮದಲ್ಲಿ  ನಡೆದಿದೆ. ಅಂತರ್​ಜಾತಿ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿ ಯುವಕನ ಮೇಲೆ ಯುವತಿ ಪೋಷಕರಿಂದ ಹಲ್ಲೆ ಮಾಡಲಾಗಿದೆ. ದೊಣ್ಣೆ ಹಾಗೂ ಕಬ್ಬಿಣದ ರಾಡ್‌ಗಳನ್ನು ಹಿಡಿದು ಯುವಕನನ್ನು ಥಳಿಸಿ ಕೊಲೆ ಮಾಡುವುದಕ್ಕೆ ಯತ್ನಿಸಲಾಗಿದೆ. ಇನ್ನು ಜನರು ಗುಂಪು ಸೇರಿದ್ದರಿಂದ ಯುವಕನನ್ನು ಬಿಟ್ಟು ಪರಾರಿ ಆಗಿದ್ದಾರೆ. ಗಂಭೀರ ಗಾಯಗೊಂಡು ಬಳಲುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರಿಂದ ಇದೀಗ ಚೇತರಿಸಿಕೊಂಡಿದ್ದಾನೆ.

ಯಾದಗಿರಿ ಜಿಲ್ಲೆಯ ಬಂದಳ್ಳಿ ಗ್ರಾಮದವರಾದ ಸಂಗೀತಾ ಹಾಗೂ ನಿಂಗಪ್ಪ ಎನ್ನುವವರು ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದಾರೆ. ಆದರೆ, ಕಳೆದ ಒಂದು ತಿಂಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ಗುಜರಾತ್‌ನಲ್ಲಿ ನೆಲೆಗೊಂಡಿದ್ದರು. ಆದರೆ, ಎರಡೂ ಕುಟುಂಬದವರು ನ್ಯಾಯ ಪಂಚಾಯಿತಿ ಮಾಡಿ ಓಡಿ ಹೋಗಿದ್ದ ಯುವಕ-ಯುವತಿಯನ್ನು ವಾಪಸ್ ಕರೆಸಿಕೊಂಡಿದ್ದರು. ಇದಾದ ನಂತರ ಪ್ರೀತಿ ಮಾಡಿದ ಯುವತಿ ಸಂಗೀತಾ ಪುನಃ ಮತ್ತೊಮ್ಮೆ ನಿಂಗಪ್ಪನೊಂದಿಗೆ ಓಡಿ ಹೋಗಿದ್ದಾಳೆ.

ಇದರಿಂದ ಸಂಗೀತಾ ಕುಟುಂಬ ಸದಸ್ಯರಿಂದ ಯುವಕ ನಿಂಗಪ್ಪನ ಮೇಲೆ ಹಲ್ಲೆ ಮಾಡಲಾಗಿದೆ. ನಿಂಗಪ್ಪನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ನಿಂಗಪ್ಪನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಕೇಸ್ ದಾಖಲಾಗಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more