
ಈ ಬಾರಿ ಮೈಸೂರು ಕೊಡಗು ಕ್ಷೇತ್ರದ ಅಭ್ಯರ್ಥಿ ಯದುವೀರ್ ಅವರನ್ನು ಗೆಲ್ಲಿಸುವುದಾಗಿ ಪ್ರತಾಪ್ ಸಿಂಹ ಹೇಳಿದ್ದಾರೆ. ಹಾಗೆಯೇ ನನಗೆ ಟಿಕೆಟ್ ಸಿಗದ ಹಿನ್ನೆಲೆ ನಮ್ಮ ಕಾರ್ಯಕರ್ತರಿಗೆ ನೋವಾಗಿದೆ ಎಂದೂ ಅಭಿಪ್ರಾಯ ಹೊರಹಾಕಿದ್ದಾರೆ.
ರಾಜ್ಯದಲ್ಲಿ ಭಾರೀ ಕುತೂಹಲ ಉಂಟು ಮಾಡಿರುವ ವಿಷಯ ಏನೆಂದರೆ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಮಿಸ್ ಆಗಿರುವುದು. ಈ ಬಗ್ಗೆ ತಮ್ಮದೇ ಆದ ರೀತಿಯಲ್ಲಿ ಅವರು ಪ್ರತಿಕ್ರಿಯೆ ನೀಡಿ, ಟಿಕೆಟ್ ತಪ್ಪಿದ್ದರ ಬಗ್ಗೆ ನೂರು ಕಾರಣಗಳನ್ನು ಹುಡುಕಬಹುದು. ಆದರೆ ಈ ಬಗ್ಗೆ ತಿಪ್ಪೆ ಅಗಿಯುವ ಕೆಲಸ ಮಾಡಬಾರದು. ಕಾರ್ಯಕರ್ತರಿಗೆ ಯದುವೀರ್ ಅವರಿಗೆ ಟಿಕೆಟ್ ಸಿಕ್ಕಿದೆ ಅನ್ನುವ ಖುಷಿಗಿಂತ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಮಿಸ್ ಆಯಿತಲ್ಲ ಎನ್ನುವ ನೋವು ಜಾಸ್ತಿ ಆಗಿದೆ. ಹಾಗೆಯೇ ಮೈಸೂರು ಕೊಡಗು ಕ್ಷೇತ್ರದಲ್ಲಿ ಕಾರ್ಯಕರ್ತರಿಗೆ ಉತ್ಸಾಹ ಹೋಗಿದೆ. ಆದರೂ ಸಹ ನಾವು ಯದುವೀರ್ ಅವರನ್ನು ಗೆಲ್ಲಿಸುವ ಮೂಲಕ ಮತ್ತೊಮ್ಮೆ ಮೋದಿಯನ್ನು ಪ್ರಧಾನಿ ಮಾಡುತ್ತೇವೆ ಎಂದು ಹೇಳಿದ್ದಾರೆ.