Jun 3, 2023, 1:15 PM IST
ತ್ರಿವಿಧ ದಾಸೋಹ ಖ್ಯಾತಿಯ ಸಿದ್ಧಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ರಾಜ್ಯದ ಮೂಲೆ ಮೂಲೆಯಿಂದ ವಿದ್ಯಾರ್ಥಿಗಳ ಪ್ರವೇಶ ಬಯಸಿ ಸಿದ್ದಗಂಗಾ ಮಠದತ್ತ ಮುಖ ಮಾಡಿದ್ದಾರೆ. ಶ್ರೀ ಸಿದ್ಧಲಿಂಗೇಶ್ವರ ಅನಾಥಾಲಯದ ಪ್ರವೇಶ ಪತ್ರಗಳನ್ನು ಒಂದು ತಿಂಗಳ ಹಿಂದೆ ನೀಡಲಾಗಿದ್ದು, ಶ್ರೀ ಸಿದ್ಧಲಿಂಗೇಶ್ವರ ಅನಾಥಾಲಯಕ್ಕೆ ಹೊಸದಾಗಿ 3 ರಿಂದ 9ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಬಯಸುವ ಗ್ರಾಮೀಣ ಬಡ ಕುಟುಂಬದ ವಿದ್ಯಾರ್ಥಿಗಳು ಖುದ್ದಾಗಿ ಬಂದು ಶ್ರೀ ಮಠದ ಲೆಕ್ಕಪತ್ರ ವಿಭಾಗದಲ್ಲಿ ಪ್ರವೇಶ ಪತ್ರವನ್ನು ಪಡೆಯಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೂ ಆದ್ಯತೆ ನೀಡಲಾಗಿದೆ. ಈ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಪೋಷಕರು ಸಹ ಮಠಕ್ಕೆ ಭೇಟಿ ನೀಡಿ ಮಠದ ಶಾಲೆಗೆ ದಾಖಲಾಗುತ್ತಿದ್ದಾರೆ.
ಇದನ್ನೂ ವೀಕ್ಷಿಸಿ: ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗುವುದಿಲ್ಲ: ಶಾಸಕ ತಮ್ಮಯ್ಯ