Jan 30, 2022, 1:25 PM IST
ಬೆಂಗಳೂರು (ಜ. 30): ಪಬ್, ಬಾರ್, ರೆಸ್ಟೋರೆಂಟ್‌ಗಳಲ್ಲಿ ಶೇ. 100 ರಷ್ಟು ಸೀಟು ಭರ್ತಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರ ಚಿತ್ರಮಂದಿರಗಳಿಗೆ ಮಾತ್ರ ಶೇ. 50 ರಷ್ಟು ಸೀಟಿನ ಮಿತಿ ಹೇರಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಚಿತ್ರಮಂದಿರಗಳಲ್ಲಿ ಶೇ. 100 ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅನುಮತಿ ಕೊಡುವಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
'ಚಿತ್ರರಂಗದವರನ್ನು ಭೇಟಿಯಾಗಿ ಮಾತನಾಡಿದ್ದೇನೆ. ತಾಂತ್ರಿಕ ಸಲಹಾ ಸಮಿತಿ ಮುಂದೆ ಇವರ ಮನವಿಯನ್ನು ಇಡುತ್ತೇನೆ. ನಂತರ ಮುಂದಿನ ನಿರ್ಧಾರ' ಎಂದು ಸಿಎಂ ಹೇಳಿದ್ಧಾರೆ.