ಕಮಲ್‌ ಹಾಸನ್-ಮಣಿರತ್ನಂ ಜೋಡಿ ʼಥಗ್‌ ಲೈಫ್‌ʼ ಹಾಡು ರಿಲೀಸ್; ಮತ್ತೆ ಗರಿಗೆದರಿದ ನಿರೀಕ್ಷೆ!

ಕಮಲ್‌ ಹಾಸನ್-ಮಣಿರತ್ನಂ ಜೋಡಿ ʼಥಗ್‌ ಲೈಫ್‌ʼ ಹಾಡು ರಿಲೀಸ್; ಮತ್ತೆ ಗರಿಗೆದರಿದ ನಿರೀಕ್ಷೆ!

Published : Apr 21, 2025, 01:05 PM ISTUpdated : Apr 21, 2025, 01:23 PM IST

ಮೂರು ದಶಕದ ನಂತರ ಕಮಲ್ ಹಾಸನ್ - ಮಣಿರತ್ನಂ ಕಾಂಬಿನೇಷನ್‌ನಲ್ಲಿ ಮೂಡಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ಥಗ್‌ ಲೈಫ್.‌ ಈ ಚಿತ್ರದ ಮೊದಲ ಹಾಡು ಬಿಡುಗಡೆ ಆಗಿದೆ. ಚೆನ್ನೈನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ..

ಕಮಲ್‌ ಹಾಸನ್-ಮಣಿರತ್ನಂ ಜೋಡಿಯ ʼಥಗ್‌ ಲೈಫ್‌ʼ ಹಾಡು ರಿಲೀಸ್!
ಮೂರು ದಶಕದ ನಂತರ ಕಮಲ್ ಹಾಸನ್ - ಮಣಿರತ್ನಂ ಕಾಂಬಿನೇಷನ್‌ನಲ್ಲಿ ಮೂಡಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ಥಗ್‌ ಲೈಫ್.‌ ಈ ಚಿತ್ರದ ಮೊದಲ ಹಾಡು ಬಿಡುಗಡೆ ಆಗಿದೆ. ಚೆನ್ನೈನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಹಾಡು ರಿಲೀಸ್ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಕಮಲ್ ಹಾಸನ್, ಸಿಂಬು, ಮಣಿರತ್ನಂ, ಅಭಿರಾಮಿ, ಅಶೋಕ್ ಸೆಲ್ವನ್, ತ್ರಿಷಾ ಸೇರಿದಂತೆ ಚಿತ್ರರಂಗದ ಹಲವು ತಾರೆಯರು ಭಾಗವಹಿಸಿದ್ರು. ಥಗ್‌ ಲೈಫ್‌ ಚಿತ್ರದ ಜಿಂಗುಚ್ಚಾ ಬಿಡುಗಡೆ ಆಗಿದ್ದು, ಹಾಡಿನಲ್ಲಿ ಕಮಲ್, ಸಿಂಬು ಕಾಣಿಸಿಕೊಂಡಿದ್ದಾರೆ. ವಿಶೇಷ ಅಂದರೆ ಈ ಹಾಡಿಗೆ ಸ್ವತಃ ಕಮಲ್‌ ಹಾಸನ್‌ ಸಾಹಿತ್ಯ ಬೆರೆದಿದ್ದಾರೆ. ಎ.ಆರ್.ರೆಹಮಾನ್ ಸಂಗೀತ ನೀಡಿದ್ದಾರೆ. 

ಶೂಟಿಂಗ್‌ ಮುಗಿಸಿ ರಿಲೀಸ್‌ ಗೆ ರೆಡಿಯಾದ ʼಎಲ್ಟು ಮುತ್ತಾʼ
ಹೈ5 ಸ್ಟುಡಿಯೋಸ್ ನಿರ್ಮಾಣದ ಚೊಚ್ಚಲ ಸಿನಿಮಾ ಎಲ್ಟು ಮುತ್ತಾ ಟೈಟಲ್‌ ನಿಂದಲೇ ನಿರೀಕ್ಷೆ ಹೆಚ್ಚಿಸಿದೆ. ಪೋಸ್ಟರ್‌ ಮೂಲಕ ಗಮನಸೆಳೆರೋ ಈ ಸಿನಿಮಾ ಈಗ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಿದ್ಧವಾಗಿದೆ. ಎಲ್ಟು ಮುತ್ತಾ ಸಿನಿಮಾದಲ್ಲಿ ನಾಯಕನಾಗಿ ಶೌರ್ಯ ಪ್ರತಾಪ್ ನಟಿಸಿದ್ದು, ರಾ ಸೂರ್ಯ ಈ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ.  ನಾಯಕಿಯಾಗಿ ಪ್ರಿಯಾಂಕಾ ಮಾಲಲಿ ಸಾಥ್ ಕೊಟ್ಟಿದ್ದಾರೆ. ಕಾಕ್ರೋಚ್ ಸುಧಿ, ಯಮುನಾ ಶ್ರೀನಿಧಿ, ನವೀನ್ ಪಡಿಲ್ ತಾರಾಬಳಗದಲ್ಲಿದ್ದಾರೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ಮೆಜೆಸ್ಟಿಕ್-2 ನಾಯಕಿ ಸಂಹಿತಾ ವಿನ್ಯಾ..!

ಕನ್ನಡ ಚಿತ್ರರಂಗದ ಪ್ರತಿಭಾವಂತ ನಟಿ ಸಂಹಿತಾ ವಿನ್ಯಾಗೆ ಹುಟ್ಟುಹಬ್ಬದ ಸಂಭ್ರಮ. ನಟಿ ಹಾಗೂ ಸೂಪರ್ ಮಾಡೆಲ್ ಆಗಿಯೂ ಗುರುತಿಸಿಕೊಂಡಿರೋ ಸಂಹಿತಾ ವಿನ್ಯಾ ನಟನೆಯಲ್ಲಿ ಬಹು ನಿರೀಕ್ಷಿತ  'ಮೆಜೆಸ್ಟಿಕ್ -2' ಚಿತ್ರ ಸಿದ್ಧವಾಗಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿರೋ ಸಂಹಿತಾ ವಿನ್ಯಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಹಾಲು ತುಪ್ಪ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಸಂಹಿತಾ ನಾಯಕಿ ಪ್ರಧಾನ ಸೀತಮ್ಮ ಬಂದ್ಲು ಸಿರಿಮಲ್ಲಿಗೆ ತೊಟ್ಟು ಚಿತ್ರದಲ್ಲಿ ಹೆಸರು ಮಾಡಿದ್ರು. ಅಲ್ಲದೆ ಅಮೃತ ಘಳಿಗೆ, ವಿಷ್ಣು ಸರ್ಕಲ್, ನಸಾಬ್, ಮಿಕ್ಸಿಂಗ್ ಪ್ರೀತಿ, ಸ್ವಾಭಿಮಾನಿ ಅಲ್ಲದೆ ತೆಲುಗು, ತಮಿಳು ಸೇರಿದಂತೆ 15ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಸಂಹಿತಾ ಮೆಜೆಸ್ಟಿಕ್ 2 ಸಿನಿಮಾದಲ್ಲಿ ನಾಯಕಿಯಾಗಿದ್ದಾರೆ.

ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ..

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
Read more