Oct 23, 2022, 12:06 PM IST
ಹಂಗಳ ಗ್ರಾಮದಲ್ಲಿ ನಿನ್ನೆ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ಇತ್ತು, ಆದರೆ ಸಚಿವರು ಸಂಜೆ 6.30ಕ್ಕೆ ಬಂದ ಕಾರಣ ಈ ವೇಳೆ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿತ್ತು. ಇದೇ ವೇಳೆ ಮಹಿಳೆಯೊಬ್ಬರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಸಚಿವರ ಬಳಿ ಬಂದಿದ್ದು, ಆ ಮಹಿಳೆಗೆ ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ನಂತರ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಭಾರತದಿಂದ ಎಸ್ಕೇಪ್ ಆಗಲು ಪ್ರಯತ್ನ, ಸಾಕ್ಷ್ಯ ನಾಶ; ಜಾಕ್ವೆಲಿನ್ ಬಗ್ಗೆ ಶಾಕಿಂಗ್ ವಿಚಾರ ಬಿಚ್ಚಿಟ್ಟ ED