ರಾಜ್ಯ ರಾಜಕಾರಣ ಮತ್ತೊಂದು ಸಲ ರಂಗೇರಿದ್ದು, ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಇದರ ನಡುವೆಯೇ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್ ಕಳಪೆ ಪ್ರದರ್ಶನ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟಿಸಲು ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಗೆ ಹೈಕಮಾಂಡ್ ಮೇಜರ್ ಸರ್ಜರಿ ಮಾಡಲು ಮುಂದಾಗಿದೆ.
ಬೆಂಗಳೂರು, (ಜೂ.19): ರಾಜ್ಯ ರಾಜಕಾರಣ ಮತ್ತೊಂದು ಸಲ ರಂಗೇರಿದ್ದು, ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಇದರ ನಡುವೆಯೇ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್ ಕಳಪೆ ಪ್ರದರ್ಶನ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟಿಸಲು ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಗೆ ಹೈಕಮಾಂಡ್ ಮೇಜರ್ ಸರ್ಜರಿ ಮಾಡಲು ಮುಂದಾಗಿದೆ.
ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರನ್ನು ಹೊರತುಪಡಿಸಿ ಉಳಿದ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿ ಕೆಪಿಸಿಸಿ ಘಟಕ ಪುನಾರಚನೆಗೆ ಎಐಸಿಸಿ ಮಹತ್ವದ ಆದೇಶ ಹೊರಡಿಸಿದ್ದು, ಯಾರಿಗೆ ಯಾವ ಹುದ್ದೆ ಸಿಗುತ್ತೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ.