Oct 7, 2019, 1:48 PM IST
ಬೆಂಗಳೂರು (ಅ.07): ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಬಿಜೆಪಿಯಲ್ಲಿ ಮೂಲೆಗುಂಪಾಗಿಸುವ ಪ್ರಯತ್ನ ನಡೆಯುತ್ತಿದೆಯಾ? ಎಂಬ ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿವೆ.
ಯಡಿಯೂರಪ್ಪ ಅನುಪಸ್ಥಿತಿಯಲ್ಲಿ ಪಕ್ಷದ ಇತರ ನಾಯಕರು ಅನರ್ಹ ಶಾಸಕರೊಂದಿಗೆ ಗೌಪ್ಯ ಸಭೆ ನಡೆಸಿರುವುದು ಈಗ ಚರ್ಚೆಗೆ ಕಾರಣವಾಗಿದೆ. ನೆರೆ ಪರಿಹಾರ ಪರಿಶೀಲನೆಗೆ ಯಡಿಯೂರಪ್ಪ ಉತ್ತರ ಕರ್ನಾಟಕ ಪ್ರವಾಸದಲ್ಲಿದ್ದಾಗ, ಇತ್ತ ಆ ಸಭೆ ನಡೆದಿದೆ.
ಕೆಲದಿನಗಳ ಹಿಂದೆ, ನಾನು ತಂತಿ ಮೇಲೆ ನಡೆಯುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದ್ದು ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಅದಕ್ಕೆ ಸ್ಪಷ್ಟೀಕರಣ ನೀಡಿ ವಿವಾದವನ್ನು ತಿಳಿಗೊಳಿಸಿದ್ದರು.