ಕಮಲ ಹಿಡಿದ ಜಾಧವ್: ಸೋಲಿಲ್ಲದ ಸರದಾರನಿಗೆ ಸವಾಲ್!

Mar 6, 2019, 1:45 PM IST

ಕಲಬುರಗಿ[ಮಾ.06]: ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಚಿಂಚೋಳಿ ಶಾಸಕ, ಬಂಜಾರ ಸಮುದಾಯದ ಮುಖಂಡ ಉಮೇಶ್ ಜಾಧವ್ ಇಂದು ಮಾ.06ರಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆಗೆ ಸವಾಲ್ ಎಸೆದಿದ್ದಾರೆ.

ಕಲ್ಬುರ್ಗಿಯ ಎನ್.ವಿ. ಮೈದಾನದಲ್ಲಿ ಇಂದು ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಉಮೇಶ್ ಜಾಧವ್ , ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮುಖಂಡರಾದ ಆರ್.ಅಶೋಕ್, ಜಗದೀಶ್ ಶೆಟ್ಟರ್, ಎಂ.ರವಿಕುಮಾರ್ ಸೇರಿದಂತೆ ಮತ್ತಿತರರ ಸಮ್ಮುಖದಲ್ಲಿ ಬಿಜೆಪಿಯ ಬಾವುಟ ಹಿಡಿದು ಸೇರ್ಪಡೆಯಾದರು.