Jul 29, 2019, 5:11 PM IST
ಬೆಂಗಳೂರು (ಜು.29): ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಪತನವಾಗಿ, ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಇಷ್ಟು ದಿನ ರಾಜೀನಾಮೆ ಕೊಟ್ಟು ಮುಂಬೈ ಸೇರಿದ್ದ ಅತೃಪ್ತರು ಅನರ್ಹರಾದ ಬಳಿಕ ಬೆಂಗಳೂರಿಗೆ ಬಂದಿಳಿಯುತ್ತಿದ್ದಾರೆ. ಸಿದ್ದರಾಮಯ್ಯರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ‘ಅನರ್ಹ’ ಶಾಸಕರೊಬ್ಬರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ರಾಜೀನಾಮೆ ಹಿಂದಿನ ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ.