ವಿಶ್ವಸಂಸ್ಥೆಯಲ್ಲಿ ಗುದ್ದಾಡಿ ತಮಿಳುನಾಡಿನಲ್ಲಿ ಮುದ್ದಾಡುತ್ತಿರುವ ಮೋದಿ-ಕ್ಸಿ!

ವಿಶ್ವಸಂಸ್ಥೆಯಲ್ಲಿ ಗುದ್ದಾಡಿ ತಮಿಳುನಾಡಿನಲ್ಲಿ ಮುದ್ದಾಡುತ್ತಿರುವ ಮೋದಿ-ಕ್ಸಿ!

Published : Oct 11, 2019, 06:32 PM IST

ಭಾರತ ಹಾಗೂ ಚೀನಾದ ಮುಖ್ಯಸ್ಥರ ನಡುವೆ ಮತ್ತೊಂದು ಅನೌಪಚಾರಿಕ ಸಭೆ ಇಂದು ತಮಿಳುನಾಡಿನ ಮಾಮಲ್ಲಾಪುರಂನಲ್ಲಿ ನಡೆಯುತ್ತಿದೆ. ಕ್ಸಿ ಜಿನ್'ಪಿಂಗ್ ಅವರನ್ನು ಸ್ವಾಗತಿಸಲು ಸ್ವತಃ ಪ್ರಧಾನಿಯೇ ವಿಮಾನ ನಿಲ್ದಾಣಕ್ಕೆ ತೆರಳಿದ್ದು, ಚೀನಾ ಅಧ್ಯಕ್ಷರನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು.

ಭಾರತ ಹಾಗೂ ಚೀನಾದ ಮುಖ್ಯಸ್ಥರ ನಡುವೆ ಮತ್ತೊಂದು ಅನೌಪಚಾರಿಕ ಸಭೆ ಇಂದು ತಮಿಳುನಾಡಿನ ಮಾಮಲ್ಲಾಪುರಂನಲ್ಲಿ ನಡೆಯುತ್ತಿದೆ. ಸದ್ಯ ನರೇಂದ್ರ ಮೋದಿ ಅವರ ಮೂರನೇ ಅನೌಪಚಾರಿಕ ಸಭೆ ಹಾಗೂ ಚೀನಾ ಅಧ್ಯಕ್ಷರೊಂದಿಗಿನ 2ನೇ ಅನೌಪಚಾರಿಕ ಶೃಂಗ ತಮಿಳುನಾಡಿನ ಕಡಲತಡಿಯ ಪ್ರವಾಸಿ ತಾಣ ಮಾಮಲ್ಲಾಪುರಂನಲ್ಲಿ ಆಯೋಜಿತವಾಗಿದೆ. ಈ ವೇಳೆ ದ್ವಿಪಕ್ಷೀಯ ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಮಹತ್ವದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದೆ. ಚೀನಾ ಹಾಗೂ ಭಾರತದ ನಡುವಿನ ಸಂಬಂಧಕ್ಕೆ 2000 ವರ್ಷಗಳ ಇತಿಹಾಸವಿದೆ. ಪಲ್ಲವರ ಆಳ್ವಿಕೆಗೆ ಒಳಪಟ್ಟಿದ್ದ ಚೆನ್ನೈನಿಂದ 50 ಕಿ.ಮೀ. ದೂರವಿರುವ ಮಾಮಲ್ಲಾಪುರಂ ಪಟ್ಟಣ ಹಾಗೂ ಚೀನಾದ ನಡುವೆ ಪ್ರಾಚೀನ ಕಾಲದಲ್ಲೇ ರಕ್ಷಣಾ ಹಾಗೂ ವ್ಯಾಪಾರ ಒಪ್ಪಂದ ನಡೆದಿತ್ತು ಎನ್ನಲಾಗಿದೆ. ಉತ್ಖನನದ ವೇಳೆ ಲಭಿಸಿರುವ ನಾಣ್ಯಗಳು ಮತ್ತು ಚಿಹ್ನೆಗಳು ಇದನ್ನು ದೃಢಪಡಿಸಿವೆ. ಪಲ್ಲವರಿಗೂ ಮುನ್ನವೇ ಅಸ್ತಿತ್ವದಲ್ಲಿದ್ದ ಈ ಪಟ್ಟಣ, ಭಾರತ ಮತ್ತು ಚೀನಾ ನಡುವೆ ರೇಷ್ಮೆ ಹಾಗೂ ಸಂಬಾರ ಪದಾರ್ಥಗಳ ವ್ಯಾಪಾರದಲ್ಲಿ ಮುಖ್ಯ ಪಾತ್ರ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಮಾಮಲ್ಲಾಪುರಂನಲ್ಲಿ ಶೃಂಗಸಭೆ ನಡೆಯುತ್ತಿದೆ. ಕ್ಸಿ ಜಿನ್'ಪಿಂಗ್ ಅವರನ್ನು ಪ್ರಧಾನಿ ಮೋದಿ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಇದಕ್ಕೂ ಮೊದಲು ನಿಗದಿತ ಸಮಯಕ್ಕೂ ಮೊದಲೇ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸತಮಿಳುನಾಡು ಸಿಎಂ ಪಳನಿಸ್ವಾಮಿ ಅತ್ಯಂತ ಅದ್ದೂರಿಯಾಗಿ ಬರಮಾಡಿಕೊಂಡರು.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

 

23:36ಮಂತ್ರಾಲಯ ಸೀತಾಪಹರಣ ಕೇಸ್‌, ಬಾಡಿಯೇ ಸಿಗದ ಕೇಸ್‌ನಲ್ಲಿ ನ್ಯಾಯದಾನ ಮಾಡಿದ ಕೋರ್ಟ್‌
25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು