ಚಿಕ್ಕೋಡಿ (ಆ.27): ಲಕ್ಷ್ಮಣ ಸವದಿಗೆ ಡಿಸಿಎಂ ಹುದ್ದೆ ನೀಡಿರುವುದಕ್ಕೆ ಬರೇ ಬಿಜೆಪಿಯಲ್ಲಿ ವಿರೋಧ ವ್ಯಕ್ತವಾಗಿರುವುದಲ್ಲ. ಬಿಜೆಪಿಯ ಈ ಕ್ರಮದ ವಿರುದ್ಧ ಪ್ರತಿಪಕ್ಷಗಳು ಕೂಡಾ ಹರಿಹಾಯ್ದಿವೆ. ಚಿಕ್ಕೋಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.