‘ಮುಖ್ಯಮಂತ್ರಿಗಳೇ, ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೋ? ಬರ-ಪ್ರವಾಹ ನಿರ್ವಹಣೆಯದ್ದೋ?’

Aug 3, 2019, 2:08 PM IST

ಬೆಂಗಳೂರು (ಆ.03): ಒಂದು ಕಡೆ ಬರ, ಇನ್ನೊಂದು ಕಡೆ ಪ್ರವಾಹ ಭೀತಿ. ಆದರೆ ಅದನ್ನು ನಿರ್ವಹಿಸಲು ಸಚಿವರೇ ಇಲ್ಲ, ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ವಿರುದ್ಧ ಸರಣಿ ಟ್ವೀಟ್‌ಗಳ ಮೂಲಕ ಸಿಟ್ಟನ್ನು ಹೊರ ಹಾಕಿದ್ದಾರೆ. 

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ?
1/3

— Siddaramaiah (@siddaramaiah)

ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ,ಕೃಷಿ,ಗ್ರಾಮೀಣ ಅಭಿವೃದ್ದಿ ಇಲಾಖೆಗಳಿಗೆ ಸಚಿವರೇ ಇಲ್ಲ.
ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ?
ಸಂಪುಟ ವಿಸ್ತರಣೆಯದ್ದೇ?
2/3

— Siddaramaiah (@siddaramaiah)

ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ,ಕೃಷಿ,ಗ್ರಾಮೀಣ ಅಭಿವೃದ್ದಿ ಇಲಾಖೆಗಳಿಗೆ ಸಚಿವರೇ ಇಲ್ಲ.
ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ?
ಸಂಪುಟ ವಿಸ್ತರಣೆಯದ್ದೇ?
2/3

— Siddaramaiah (@siddaramaiah)

ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ?
3/3

— Siddaramaiah (@siddaramaiah)