ಕುಮಾರಧಾರಾ ನದಿಯಲ್ಲಿ ಸಿಕ್ಕ ಮದ್ಯದ ಬಾಟಲಿಗಳೆಷ್ಟು? ಇದು ನಮ್ಮ ಹಣೆಬರಹ!

ಕುಮಾರಧಾರಾ ನದಿಯಲ್ಲಿ ಸಿಕ್ಕ ಮದ್ಯದ ಬಾಟಲಿಗಳೆಷ್ಟು? ಇದು ನಮ್ಮ ಹಣೆಬರಹ!

Published : Apr 29, 2019, 06:26 PM ISTUpdated : Apr 29, 2019, 06:28 PM IST

ನದಿ ಮತ್ತು ನೀರಿನ ಮೂಲಗಳು ಮಾನವನ ದುರಾಸೆಯ ಪ್ರತೀಕವಾಗಿ ಪ್ರತಿದಿನ ಮಾಲಿನ್ಯದ ಪ್ರಮಾಣದಲ್ಲಿ ಏರಿಕೆಯ ಹಾದಿಯಲ್ಲಿಯೇ ಸಾಗುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದ ಕ್ಷೇತ್ರಕ್ಕೆ ಇನ್ನೊಂದು ಅರ್ಥ ತಂದುಕೊಟ್ಟಿರುವ ಕುಮಾರಧಾರ ನದಿಯೂ ಮಾನವನ ಆಸೆಗೆ ಬಲಿಯಾಗಿ ಮಾಲಿನ್ಯದ ಗೂಡಾಗಿದೆ. ಆದರೆ ಒಂದು ಸಂಘಟನೆ ಸ್ವಯಂ ಆಘಿ ಸ್ವಚ್ಛತಾ ಕಾರ್ಯಕ್ಕೆ ಇಳಿದಿದೆ.

ನದಿ ಮತ್ತು ನೀರಿನ ಮೂಲಗಳು ಮಾನವನ ದುರಾಸೆಯ ಪ್ರತೀಕವಾಗಿ ಪ್ರತಿದಿನ ಮಾಲಿನ್ಯದ ಪ್ರಮಾಣದಲ್ಲಿ ಏರಿಕೆಯ ಹಾದಿಯಲ್ಲಿಯೇ ಸಾಗುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದ ಕ್ಷೇತ್ರಕ್ಕೆ ಇನ್ನೊಂದು ಅರ್ಥ ತಂದುಕೊಟ್ಟಿರುವ ಕುಮಾರಧಾರ ನದಿಯೂ ಮಾನವನ ಆಸೆಗೆ ಬಲಿಯಾಗಿ ಮಾಲಿನ್ಯದ ಗೂಡಾಗಿದೆ. ಆದರೆ ಒಂದು ಸಂಘಟನೆ ಸ್ವಯಂ ಆಘಿ ಸ್ವಚ್ಛತಾ ಕಾರ್ಯಕ್ಕೆ ಇಳಿದಿದೆ.

ಕುಮಾರಧಾರಾ ನದಿ ಸ್ವಚ್ಛ ಮಾಡಲು ಇಳಿದ ಯುವ ಬ್ರಿಗೇಡ್ ತಂಡಕ್ಕೆ ಸಿಕ್ಕಿದ್ದು ರಾಶಿ ರಾಶಿ ಕಸದ ಪರ್ವತಗಳೂ. ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನದಿಗಳಿದ ಸ್ವಯಂ ಸೇವಕರು ಪ್ಲಾಸ್ಟಿಕ್ ಸೇರಿದಂತೆ ಇತರೇ ತ್ಯಾಜ್ಯಗಳನ್ನು ಕಂಡು ದಂಗಾಗಿ ಹೋಗಿದ್ದಾರೆ.

ಕುಮಾರಧಾರಾ ನದಿಯಲ್ಲಿ ಶೇಖರಗೊಂಡಿದ್ದ 20ಕ್ಕೂ ಹೆಚ್ಚು ಟ್ರಾಕ್ಟರ್ ಗಳಷ್ಟು ತ್ಯಾಜ್ಯವನ್ನು ನದಿಯಿಂದ ಹೊರ ತೆಗೆಯಲಾಗಿದೆ. ಸುಮಾರು 10 ಸಾವಿರ ಪ್ಲಾಸ್ಟಿಕ್ ಮತ್ತು ಗಾಜಿನ ಬಾಟಲಿಗಳನ್ನು ನದಿಯಿಂದ ಎತ್ತಲಾಗಿದ್ದು, ಇವುಗಳಲ್ಲಿ 3 ಸಾವಿರಕ್ಕೂ ಹೆಚ್ಚು ಮದ್ಯದ ಬಾಟಲಿಗಳು ಸಿಕ್ಕಿರುವುದು ನಮ್ಮ ಜನ ಎತ್ತ ಸಾಗಿದ್ದಾರೆ ಎಂಬ ಕತೆ ಹೇಳುತ್ತಿದೆ. ಸುಬ್ರಹ್ಮಣ್ಯ ಕ್ಷೇತ್ರ ಪರಿಸರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಇದ್ದರೂ ಇಷ್ಟೊಂದು ಬಾಟಲಿ ಎಲ್ಲಿಂದ ಬಂತು ಎಂಬುದಕ್ಕೆ ಉತ್ತರ ನಮಗೆ ಗೊತ್ತಿದೆ.

ಸುಬ್ರಹ್ಮಣ್ಯದಲ್ಲಿ 12 ಕೋಟಿ ವೆಚ್ಚದಲ್ಲಿ ಶುದ್ಧೀಕರಣ ಘಟಕ ತೆರೆದಿದ್ದರೂ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇದೀಗ ಯುವ ಬ್ರಿಗೇಡ್ ಸಂಘಟನೆಯ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಕಳೆದ ಎರಡು ದಿನಗಳಿಂದ ಸ್ವಚ್ಛತಾ ಕಾರ್ಯ ನಡೆಸಿದ್ದು ಯಾತ್ರಿಗಳು ಇವರ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?