May 11, 2022, 8:20 PM IST
ಬೆಂಗಳೂರು(ಮೇ.11): ಕೋವಿಡ್ ಭೀತಿಯಿಂದಾಗಿ ಮುಂದೂಡಲ್ಪಟ್ಟಿದ್ದ ಕರ್ನಾಟಕ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, 14 ವರ್ಷದೊಳಗಿನವರ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟವು ಮೇ 16ರಿಂದ ಆರಂಭವಾಗಲಿದೆ. ರಾಜ್ಯ ಸರ್ಕಾರದ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ಜಂಟಿಯಾಗಿ ಈ ಕ್ರೀಡಾಕೂಟವನ್ನು ಆಯೋಜಿಸಿದೆ.
ಗ್ಯಾರೇಜ್ ಸೇರಬೇಕಿದ್ದ ಶೇಷೇಗೌಡ ಈಗ ರಾಷ್ಟ್ರೀಯ ಹಾಕಿಪಟು..!
ಸರ್ಕಾರದಿಂದ ಮಿನಿ ಒಲಿಂಪಿಕ್ಸ್‌ಗೆ 2.5 ಕೋಟಿ ಅನುದಾನ ನೀಡಲಾಗಿದೆ. ಕ್ರೀಡಾಕೂಟದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು 5-6 ಸಾವಿರ ವಿದ್ಯಾರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, 20 ವಿವಿಧ ಸ್ಪರ್ಧೆಗಳು ನಡೆಯಲಿವೆ. ಪ್ರಶಸ್ತಿ ವಿಜೇತರಿಗೆ ನಗದು ಬಹುಮಾನ ನೀಡಿ ಪುರಸ್ಕರಿಸಲಾಗುವುದು ಎಂದು ಕ್ರೀಡಾಕೂಟದ ರೂವಾರಿ ಕೆಒಎ ಅಧ್ಯಕ್ಷ ಗೋವಿಂದರಾಜು ತಿಳಿಸಿದ್ದಾರೆ.