Mar 21, 2022, 6:03 PM IST
ಬೆಂಗಳೂರು, (ಮಾ.21): ಕರ್ನಾಟ ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಗರಿಗೆದರಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಉಳಿದಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಪ್ಲಾನ್‌ಗಳು ನಡೆದಿವೆ. ಅಲ್ಲದೇ ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕೆಂಬ ಚಿಂತನೆಗಳು ನಡೆದಿದೆ.
ಬೊಮ್ಮಾಯಿ ಸಂಪುಟಕ್ಕೆ ಸರ್ಜರಿ ಮಾಡಿ ಎಲೆಕ್ಷನ್‌ಗೆ ತಯಾರಿ, ಯಾರಿಗೆ ಲಕ್? ಯಾರಿಗೆ ಕೊಕ್?
ಮುಂಬರುವ ಚುನಾವಣೆ ದೃಷ್ಟಿ ಇಟ್ಟುಕೊಂಡು ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಹಾಕುತ್ತಿದೆ. 4+4 ಸೂತ್ರದಡಿಯಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್ ಮೊದಲ ವಾರದಲ್ಲೇ ಸಂಪುಟ ವಿಸ್ತರಣೆ ನಡೆಯಲಿದೆ. ಹಾಗಾದ್ರೆ, 4+4 ಸೂತ್ರ ಏನು?