ಸದ್ಯದಲ್ಲೇ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೂ ಕರ್ನಾಟಕ ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಬದಲಾವಣೆಗಳಾವ ಸಾಧ್ಯತೆ ತೀರಾ ಕಡಿಮೆ ಎನಿಸಿದೆ. ಪಂಚ ರಾಜ್ಯಗಳ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಮಾಡುವ ಬಗ್ಗೆ ಹೈಕಮಾಂಡ್ ಚಿಂತಿಸಿದೆ ಎನ್ನಲಾಗಿದೆ.
ಬೆಂಗಳೂರು(ಫೆ.03): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ದೆಹಲಿಗೆ ತೆರಳುವುದು ಖಚಿತವಾಗುತ್ತಿದ್ದಂತೆಯೇ, ರಾಜ್ಯದಲ್ಲಿ ಸಂಪುಟ ಪುನಾರಚನೆಯ (Cabinet Reshuffle) ಚರ್ಚೆ ಮತ್ತೆ ಮುನ್ನಲೆಗೆ ಬಂದಿತ್ತು. ಇದೆಲ್ಲದರ ನಡುವೆ ಬಿಜೆಪಿ ಹೈಕಮಾಂಡ್ ಸಚಿವಾಕಾಂಕ್ಷಿಗಳಿಗೆ ಮತ್ತೆ ಶಾಕ್ ನೀಡಿದೆ.
ಹೌದು, ಸದ್ಯದಲ್ಲೇ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೂ ಕರ್ನಾಟಕ ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಬದಲಾವಣೆಗಳಾವ ಸಾಧ್ಯತೆ ತೀರಾ ಕಡಿಮೆ ಎನಿಸಿದೆ. ಪಂಚ ರಾಜ್ಯಗಳ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಮಾಡುವ ಬಗ್ಗೆ ಹೈಕಮಾಂಡ್ ಚಿಂತಿಸಿದೆ ಎನ್ನಲಾಗಿದೆ.
ಅಷ್ಟಕ್ಕೂ ಪಂಚ ರಾಜ್ಯಗಳ ಚುನಾವಣೆಗೂ(5 State Election), ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೂ ಏನೂ ಸಂಬಂಧ, ಪುನಾರಚನೆ ಅಥವಾ ವಿಸ್ತರಣೆ ತಡವಾಗಲು ಕಾರಣವೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.