Dec 21, 2020, 12:14 PM IST
ಬೆಂಗಳೂರು (ಡಿ. 21): ಏಪ್ರಿಲ್- ಮೇ ತಿಂಗಳಿನಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಗೆಲ್ಲಿಸಲೇಬೇಕು ಎಂದು ಹಟಕ್ಕೆ ಬಿದ್ದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಅಬ್ಬರದ ಸಂಚಾರ ನಡೆಸಿದ್ದಾರೆ.
ಸಿಎಂ ನಾಯಕತ್ವ ಬದಲಾವಣೆ ; ಹೈ ಕಮಾಂಡ್‌ನಿಂದ ಬಂತು ಸ್ಪಷ್ಟ ಸಂದೇಶ
ತೃಣಮೂಲ ಕಾಂಗ್ರೆಸ್ಸಿನ ಪ್ರಭಾವಿ ನಾಯಕ ಸುವೇಂದು ಅಧಿಕಾರಿ, ವಿವಿಧ ಪಕ್ಷಗಳ 9 ಶಾಸಕರು, ಓರ್ವ ಸಂಸದನನ್ನು ಪಕ್ಷಕ್ಕೆ ಬರಮಾಡಿಕೊಂಡು, ಮಮತಾ ಬ್ಯಾನರ್ಜಿ ವಿರುದ್ಧ ಚುನಾವಣಾ ರಣಕಹಳೆ ಮೊಳಗಿಸಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಬಿಜೆಪಿ ಸರ್ಕಾರ ರಚಿಸಲಿದೆ ಎಂದಿದ್ದಾರೆ.