ಬೆಂಗಳೂರಿನಲ್ಲಿ ಪಕ್ಷಗಳ ಹೊಂದಾಣಿಕೆ ರಾಜಕೀಯ ಅಂತ್ಯಗೊಳಿಸಲು ಅಮಿತ್ ಶಾ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಪದೇ ಪದೇ ಗೆಲ್ಲುತ್ತಿರುವ ಕ್ಷೇತ್ರ ಗೆಲ್ಲಲು ಅಮಿತ್ ಶಾ ಸೂಚಿಸಿದ್ದಾರೆ.
ಬೆಂಗಳೂರಿನ 29 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲಲು ಅಮಿತ್ ಶಾ ಪ್ಲಾನ್ ಮಾಡಿದ್ದಾರೆ. ಈ ಕುರಿತು ಸಭೆ ನಡೆಸಿದ ಅಮಿತ್ ಶಾ, ರಾಜ್ಯ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕೆಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವಿನ ನಗೆ ಬೀರುತ್ತಿದ್ದಾರೆ. ಇದಕ್ಕೆ ಕಾರಣವೇನು? ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನಾಯಕರು ಸತತವಾಗಿ ಗೆಲ್ಲುತ್ತಿರುವ ಕ್ಷೇತ್ರಗಳನ್ನು ಪ್ರಸ್ತಾಪಿಸಿದ ಅಮಿತ್ ಶಾ, ಇದು ಬಿಜೆಪಿ ಪಾಲಾಗಬೇಕು ಎಂದು ಸೂಚಿಸಿದ್ದಾರೆ. ಹೊಂದಾಣಿಕೆ ರಾಜಕೀಯ ಅಂತ್ಯಗೊಳಿಸಲು ಖಡಕ್ ವಾರ್ನಿಂಗ್ ನೀಡಿದ್ದಾರೆ.