Party Rounds: ನಾಳೆ ಬಿ.ಎಲ್‌.ಸಂತೋಷ್‌ ಸಭೆಯಲ್ಲಿ ಆಕ್ರೋಶ ಸ್ಫೋಟವಾಗುತ್ತಾ?

Aug 30, 2023, 9:03 PM IST

ಬೆಂಗಳೂರು (ಆ.30): ನಾಳೆ ಬೆಳಗ್ಗೆ 10:30ಕ್ಕೆ ಬಿಜೆಪಿ ಕಚೇರಿಯಲ್ಲಿ ಹೈವೋಲ್ಟೇಜ್ ಸಭೆ ನಡೆಯಲಿದ್ದು, ಬಿಜೆಪಿಯ '224 ಅಭ್ಯರ್ಥಿಗಳು' ಹಾಗೂ 25 ಸಂಸದರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಲೋಕಸಭಾ ಚುನಾವಣೆಗಾಗಿ ಸಮಿತಿ ರಚನೆಯಾಗುವ ಸಾಧ್ಯತೆಯಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಸಮಿತಿ ರಚಿಸಿ, ಜವಾಬ್ದಾರಿ ಹಂಚಿಕೆ ಮಾಡಲಾಗುತ್ತದೆ. ಈ ಸಭೆಯಲ್ಲಿ ನಳಿನ್ ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೂಡಾ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಆಕ್ರೋಶ ಸ್ಫೋಟವಾಗುತ್ತಾ ಎಂಬ ಪ್ರಶ್ನೆ ಮೂಡಿದ್ದು, ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.