ಆನಂದ್ ಸಿಂಗ್ ಸಹೋದರಿ ರಾಣಿ ಸಂಯುಕ್ತ ಅವರು ಸ್ವತ: ಸಹೋದರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಿಂದ ಕುಟುಂಬ ರಾಜಕಾರಣ ಆರೋಪ ಮಾಡಿರುವ ಇವರು, ಹೊಸಪೇಟೆಯಿಂದ ಪಕ್ಷೇತರರಾಗಿ ಕಣಕ್ಕಿಳಿಯೋದಾಗಿಯೂ ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಹಲವೆಡೆ ಬಂಡಾಯವೂ ಹೆಚ್ಚಾಗಿದೆ. ಇದೇ ರೀತಿ, ವಿಜಯನಗರದಲ್ಲಿ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ್ ಸಿಂಗ್‌ಗೆ ಬಿಜೆಪಿ ಟಿಕೆಟ್ ನೀಡಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಆನಂದ್ ಸಿಂಗ್ ಸಹೋದರಿ ರಾಣಿ ಸಂಯುಕ್ತ ಅವರು ಸ್ವತ: ಸಹೋದರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಿಂದ ಕುಟುಂಬ ರಾಜಕಾರಣ ಆರೋಪ ಮಾಡಿರುವ ಇವರು, ಹೊಸಪೇಟೆಯಿಂದ ಪಕ್ಷೇತರರಾಗಿ ಕಣಕ್ಕಿಳಿಯೋದಾಗಿಯೂ ಹೇಳಿದ್ದಾರೆ. ಬ್ಲಾಕ್‌ಮೇಲ್ ಮಾಡಿ ಮಗನಿಗೆ ಟಿಕೆಟ್ ಕೊಡಿಸಿದ್ದಾರೆ ಎಂದೂ ಆನಂದ್ ಸಿಂಗ್ ಸಹೋದರಿ ರಾಣಿ ಸಂಯುಕ್ತ ಆರೋಪಿಸಿದ್ದಾರೆ.