ನಾಳೆಯಿಂದಲೇ ಅನ್ನಭಾಗ್ಯ ಯೋಜನೆ ಜಾರಿ, ಹಣ ಕೂಡ ಅಕೌಂಟ್‌ಗೆ ಬರಲಿದೆ: ಮುನಿಯಪ್ಪ

ನಾಳೆಯಿಂದಲೇ ಅನ್ನಭಾಗ್ಯ ಯೋಜನೆ ಜಾರಿ, ಹಣ ಕೂಡ ಅಕೌಂಟ್‌ಗೆ ಬರಲಿದೆ: ಮುನಿಯಪ್ಪ

Published : Jun 30, 2023, 01:00 PM IST

ಫಲಾನುಭವಿಗಳ ಖಾತೆಗೆ ಪ್ರತಿ ಕೆಜಿ ಅಕ್ಕಿಗೆ 34 ರೂ.ನಂತೆ ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿಯ ಹಣವನ್ನು ಜುಲೈ 1ರಿಂದ ಹಾಕಲಾಗುವುದು ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ. 
 

ಬೆಂಗಳೂರು: ನಾವು ಮಾತು ಕೊಟ್ಟಂತೆ ಜುಲೈ 1 ರಿಂದಲೇ ಅನ್ನಭಾಗ್ಯ ಯೋಜನೆ ಜಾರಿಯಾಗಲಿದೆ. ಅಕ್ಕಿ ಜೊತೆಗೆ ಫಲಾನುಭವಿಗಳಿಗೆ ಹಣವನ್ನು ಹಾಕಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್‌. ಮುನಿಯಪ್ಪ ಹೇಳಿದ್ದಾರೆ. ಎಂಎಸ್ ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಅವರು ಹೇಳಿದ್ದಾರೆ. ಪೂರ್ತಿಯಾಗಿ ಅಕ್ಕಿ ಸಿಗುವ ತನಕ ಈ ರೀತಿ ಮಾಡುತ್ತೇವೆ. ಬಳಿಕ ಅಕ್ಕಿಯನ್ನೇ ಕೊಡುತ್ತೇವೆ ಎಂದು ಆಹಾರ ಸಚಿವರು ಹೇಳಿದ್ದಾರೆ. ದಕ್ಷಿಣ ಭಾಗದ ಜನರಿಗೆ ರಾಗಿ, ಉತ್ತರ ಕರ್ನಾಟಕ ಭಾಗದ ಜನರಿಗೆ ಜೋಳ ಕೊಡುತ್ತೇವೆ. ರಾಗಿ ದಾಸ್ತಾನಾಗಿದ್ದು, ಜೋಳ ಸಂಗ್ರಹಿಸಲಾಗುತ್ತಿದೆ ಎಂದು ಸಚಿವರು ಹೇಳಿದರು. ನಾಳೆಯಿಂದಲೇ ಜನರ ಬ್ಯಾಂಕ್‌ ಖಾತೆಗೆ ಹಾಕಲು ಹಣ ರೆಡಿಯಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂ.ನಂತೆ ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿಯ ಹಣ ಸಿಗುತ್ತದೆ ಎಂದು ಅವರು ಹೇಳಿದರು.

ಇದನ್ನೂ ವೀಕ್ಷಿಸಿ: 11 ಕಡೆ.. 30 ಗಂಟೆ ದಾಳಿ.. ಸಿಕ್ಕಿದ್ದು ಕೋಟಿ ಕೋಟಿ: ಸಂಬಳ ಸಾವಿರ, ಆದ್ರೆ ಈತ ಕೋಟಿ ಕುಳ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more