ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಮತಾಂತರ ನಿಷೇಧ ಕಾಯ್ದೆ ವಾಪಾಸ್: ಪ್ರಿಯಾಂಕ್ ಖರ್ಗೆ ಘೋಷಣೆ

Sep 16, 2022, 3:48 PM IST

ಬೆಂಗಳೂರು, (ಸೆಪ್ಟೆಂಬರ್.16): ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರ ತೀವ್ರ ವಿರೋಧದ ನಡುವೆ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯಿದೆಯನ್ನು ಅಂಗೀಕರಿಸಿದೆ. ಜನರನ್ನು  ಬಲವಂತವಾಗಿ ಮತಾಂತರಕ್ಕೆ ದೂಡಿದರೆ ಅಥವಾ ಪ್ರೇರೇಪಿಸಿದರೆ ಜಾಮೀನು ರಹಿತ ಮತ್ತು ಶಿಕ್ಷಾರ್ಹ ಅಪರಾಧವಾಗುತ್ತದೆ. 

ಮತಾಂತರ ನಿಷೇಧ ಮಸೂದೆ ಅಂಗೀಕಾರ, ರಾಜ್ಯಪಾಲರ ಅಂಕಿತ ಒಂದೇ ಬಾಕಿ!

ರಾಜ್ಯ ವಿಧಾನ ಪರಿಷತ್ ನಲ್ಲಿ ನಿನ್ನೆ ಇದಕ್ಕೆ ಅಂಗೀಕಾರ ಸಿಕ್ಕಿದೆ. ಇಂತಹ ಕಾನೂನನ್ನು ಜಾರಿಗೊಳಿಸಿದ ದೇಶದ ಹತ್ತನೇ ರಾಜ್ಯ ಕರ್ನಾಟಕವಾಗಿದೆ. ಇನ್ನು ಇದಕ್ಕೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ  ಮತಾಂತರ ನಿಷೇಧ ಕಾಯ್ದೆ ವಾಪಾಸ್ ಪಡೆಯುವುದಾಗಿ ಘೋಷಣೆ ಮಾಡಿದ್ದಾರೆ.