Jul 29, 2021, 12:35 AM IST
ಬೆಂಗಳೂರು(ಜು. 29) ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. . ಬಸವರಾಜ ಬೊಮ್ಮಾಯಿ ನೂತನ ಸಿಎಂ ಆಗಿ ಆಯ್ಕೆಯಾದ ನಂತರ ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಬಳಿ ದೌಡಾಯಿಸುತ್ತಿದ್ದಾರೆ.
ಕರ್ನಾಟಕದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಂದರ್ಶನದಲ್ಲಿ ಅನೇಕ ವಿಚಾರ ಹೇಳಿದ್ದಾರೆ. ಚಲ್ತಾ ಹೇ... ಎಂಬ ಅಧಿಕಾರಿಗಳ ವರ್ತನೆ ಇನ್ನು ಮುಂದೆ ನಡೆಯುವುದಿಲ್ಲ. ಎಲ್ಲರಿಗೂ ಸ್ವಾಭಿಮಾನದ ಬದುಕು ಕಲ್ಪಿಸಿಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ.