ಗುಜರಾತ್ ಚುನಾವಣೆಯಲ್ಲಿ ಯಾರಿಗೆ ಗೆಲುವು? ಶೇ.66 ರಷ್ಟು ಜನ ಬಿಜೆಪಿಗೆ ಕಡೆ ಒಲವು, ಸಮೀಕ್ಷಾ ವರದಿ!

Oct 31, 2022, 9:56 PM IST

ಬೆಂಗಳೂರು(ಅ.31):  ಗುಜರಾತ್ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ.  ಇದೀಗ ಏಷ್ಯಾನೆಟ್ ಸುವರ್ಣನ್ಯೂಸ್ ಗುಜರಾತ್ ಚುನಾವಣೆ ಕುರಿತು ಸಮೀಕ್ಷೆ ನಡೆಸಿದೆ. ಈ ವರದಿ ಪ್ರಕಾರ ಗುಜರಾತ್‌ನಲ್ಲಿ ಶೇಕಡಾ 66 ರಷ್ಟು ಮಂದಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದಿದ್ದಾರೆ. ಇತ್ತ ಬಿಜೆಪಿ ವಿರೋಧಿ ಮತಗಳನ್ನು ಪಡೆಯುವಲ್ಲಿ ಆಮ್ ಆದ್ಮಿ ಪಾರ್ಟಿ ಯಶಸ್ವಿಯಾಗಿದೆ. ಕಾಂಗ್ರೆಸ್ ಇರುವ ಮತಗಳನ್ನು ಕಳೆದುಕೊಳ್ಳುವ ಭೀತಿ ಎದುರಿಸುತ್ತಿದೆ. ವೋಟ್ ಶೇರಿಂಗ್‌ನಲ್ಲೂ ಆಮ್ ಆದ್ಮಿ ಪಾರ್ಟಿ ಬಹುಪಾಲು ಪಡೆಯುತ್ತಿರುವುದು ವರದಿಯಲ್ಲಿ ಬಹಿರಂಗವಾಗಿದೆ. ಗುಜರಾತ್ ಚುನಾವಣೆಯ ಸಮೀಕ್ಷಾ ವರದಿಯ ಸಂಪೂರ್ಣ ಮಾಹಿತಿ ಇಲ್ಲಿದೆ.