Assembly Election: ಸಚಿವ ಸೋಮಣ್ಣ ಜೊತೆ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರ್ಪಡೆ?

Assembly Election: ಸಚಿವ ಸೋಮಣ್ಣ ಜೊತೆ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರ್ಪಡೆ?

Published : Mar 13, 2023, 06:25 PM IST

ಪಕ್ಷಾಂತರ ವಿಚಾರದ ಬಗ್ಗೆ ಮಾತನಾಡಿದ ವಸತಿ ಸಚಿವ ವಿ. ಸೋಮಣ್ಣ, ರಾಜಕಾರಣದಲ್ಲಿ ಕವಲುದಾರಿಗಳಿರುತ್ತವೆ. ನಾನೇನು ಸನ್ಯಾಸಿ ಅಲ್ಲ. ಬಿಜೆಪಿಯಿಂದ ಟಿಕೆಟ್‌ ಕೊಟ್ಟರೆ ನಿಂತ್ಕೋತೀನಿ. ಎಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ.

ಬೆಂಗಳೂರು (ಮಾ.13): ವಸತಿ ಸಚಿವ ವಿ. ಸೋಮಣ್ಣ ಅವರು ಬಿಜೆಪಿಯನ್ನು ತೊರೆದು ಕಾಂಗ್ರೆಸ್‌ ಸೇರ್ಪಡೆ ಆಗುತ್ತಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಪಕ್ಷಾಂತರ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಕವಲುದಾರಿಗಳಿರುತ್ತವೆ, ನಾನೇನು ಸನ್ಯಾಸಿ ಅಲ್ಲ. ಬಿಜೆಪಿಯಿಂದ ಟಿಕೆಟ್‌ ಕೊಟ್ಟರೆ ನಿಂತ್ಕೋತೀನಿ, ಇಲ್ಲವೆಂದರೆ ಇಲ್ಲ. ನಾನು ಯಾವತ್ತಾದರೂ ನನ್ನ ಮಗನಿಗೆ ಟಿಕೆಟ್‌ ಕೇಳಿದ್ದೇನಾ.? ಎಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಡಿ.ಕೆ. ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ನನ್ನ ಸ್ನೇಹಿತರಾಗಿದ್ದು, ಅವರ ಕೆಲಸ ಅವರು ಮಾಡುತ್ತಾರೆ. ನನ್ನ ಕೆಲಸ ನಾನು ಮಾಡುತ್ತೇನೆ ಎಮದು ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ವಿ. ಸೋಮಣ್ಣ ಅವರು ತಮ್ಮ ಮಗನಿಗೆ ರಾಜಾಜಿನಗರದಿಂದ ಕಾಂಗ್ರೆಸ್‌ ಟಿಕೆಟ್‌ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ಗೋವಿಂದರಾಜನಗರ ಮತ್ತು ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಎಂ. ಕೃಷ್ಣಪ್ಪ ಅವರು ಪ್ರಭಲರಾಗಿದ್ದು, ವಿಜಯನಗರದಲ್ಲಿ ಕೃಷ್ಣಪ್ಪ ಮತ್ತು ಗೋವಿಂದರಾಜನಗರದಲ್ಲಿ ಅವರ ಪುತ್ರ ಪ್ರಿಯಾಕೃಷ್ಣ ಅವರಿಗೆ ಕಾಂಗ್ರೆಸ್‌ನಿಂದ ಕ್ಷೇತ್ರ ಬಿಟ್ಟುಕೊಡಬೇಕಾಗಬಹುದು. ಈ ಹಿನ್ನೆಲೆಯಲ್ಲಿ ರಾಜಾಜಿನಗರದ ಕಾಂಗ್ರೆಸ್‌ ಟಿಕೆಟ್‌ ಅನ್ನು ಅರುಣ್‌ ಸೋಮಣ್ಣ ಅವರಿಗೆ ನೀಡಿದರೆ ತಾವು ಬೇರೊಂದು ಕ್ಷೇತ್ರಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೇಳಿಬಂದಿವೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more