ಗುಜರಾತ್‌ನಲ್ಲಿ ಬಿಜೆಪಿ ಓಟಕ್ಕೆ ದಾಖಲೆ ಉಡೀಸ್, ಹಿಮಾಚಲದಲ್ಲಿ ಅಧಿಕಾರಕ್ಕೇರಿದ ಕಾಂಗ್ರೆಸ್, ಇಲ್ಲಿದೆ ಗೆಲುವಿನ ಕಾರಣ!

ಗುಜರಾತ್‌ನಲ್ಲಿ ಬಿಜೆಪಿ ಓಟಕ್ಕೆ ದಾಖಲೆ ಉಡೀಸ್, ಹಿಮಾಚಲದಲ್ಲಿ ಅಧಿಕಾರಕ್ಕೇರಿದ ಕಾಂಗ್ರೆಸ್, ಇಲ್ಲಿದೆ ಗೆಲುವಿನ ಕಾರಣ!

Published : Dec 08, 2022, 10:49 PM IST

ಗುಜರಾತ್‌ ಸಂಪೂರ್ಣ ಕೇಸರಿ ಮಯ, ದಾಖಲೆ ಗೆಲುವಿಗೆ ಮೋದಿ ಅಭಿನಂದನೆ,  ಹಿಮಾಚಲದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಬಿಟ್ಟುಕೊಟ್ಟ ಬಿಜೆಪಿ,  ಗುಜರಾತ್‌ನಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನಕ್ಕೆ ಕಾರಣವೇನು?ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 156 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿದೆ. ಗುಜರಾತ್ ರಾಜಕೀಯ ಇತಿಹಾಸದಲ್ಲಿ ಬಿಜೆಪಿಯ ಹೊಸ ಅಧ್ಯಾಯ ಬರೆದಿದೆ. ಗುಜರಾತ್ ಚುನಾವಣೆ ಗೆಲುವಿನ ಹಿಂದೆ ಪ್ರಧಾನಿ ಮೋದಿ ಜನಪ್ರಿಯತೆ ಹಾಗೂ ವಿಶ್ವಾಸಾರ್ಹತೆ ಪ್ರಮುಖ ಕಾರಣವಾಗಿದೆ. ಇದರ ಜೊತೆ ಮತ್ತೆ ಮೂರು ಕಾರಣಗಳಿವೆ. ಹಿಮಾಚಲ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಕಳೆದ ಬಾರಿ 44 ಸ್ಥಾನ ಗೆದ್ದು ಅಧಿಕಾರ ಹಿಡಿದಿದ್ದ ಬಜೆಪಿ  ಈ ಬಾರಿ 25 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ತವರು ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ವಿಫಲವಾಗಿದೆ. ಗುಜರಾತ್‌ನಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. 17 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಗುಜರಾತ್‌ನಲ್ಲಿ ಮೋದಿ 36 ರ್ಯಾಲಿ ಮಾಡಿದ್ದರೆ, ಅಮಿತ್ ಶಾ 40ಕ್ಕೂ ಹೆಚ್ಚು ರ್ಯಾಲಿ ಮಾಡಿದ್ದಾರೆ. ಇತ್ತ ರಾಹುಲ್ ಗಾಂಧಿ ಹೆಸರಿಗೆ ಮಾತ್ರ 2 ರ್ಯಾಲಿ ಮಾಡಿ ಮತ್ತೆ ಗುಜರಾತ್‌ ಕಡೆ ಮುಖ ಮಾಡಿಲ್ಲ. ಇದರ ಜೊತೆಗೆ ಇನ್ನೂ ಇದೆ ಸೋಲಿಗೆ ಕಾರಣ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more