ವರುಣಾ ಅತಿರಥರ ಅಖಾಡ: ಸಿದ್ದು ವಿರುದ್ಧ ನಿಲ್ಲೋಕೆ ವಿಜಯೇಂದ್ರ ರೆಡಿ..?

ವರುಣಾ ಅತಿರಥರ ಅಖಾಡ: ಸಿದ್ದು ವಿರುದ್ಧ ನಿಲ್ಲೋಕೆ ವಿಜಯೇಂದ್ರ ರೆಡಿ..?

Published : Mar 22, 2023, 09:45 AM ISTUpdated : Mar 22, 2023, 09:46 AM IST

2023ರ ಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ವರುಣಾ ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ.

ವರುಣಾ ವಿಧಾನಸಭಾ ಕ್ಷೇತ್ರವು ಸಿದ್ದರಾಮಯ್ಯ ಕೋಲಾರ ಬಿಟ್ಟ ಮೇಲೆ ರಂಗೇರಿದೆ. ಮಗನಿಗಾಗಿ ಬಿಟ್ಟು ಕೊಟ್ಟಿದ್ದ ಕ್ಷೇತ್ರವನ್ನ ಮಗನ ಬಳಿಯೇ ಸಿದ್ದು ಕೇಳಿ ವಾಪಸ್ ತಗೋತಾರೆ ಎಂದು ಹೇಳಲಾಗುತ್ತಿದೆ.  ಮೈಸೂರಿನ ಎಲ್ಲಾ ಕ್ಷೇತ್ರಗಳ ತೂಕ ಒಂದಾದ್ರೆ ವರುಣಾದ ತೂಕವೇ ಇನ್ನೊಂದು. ಸದ್ಯಕ್ಕೆ ವರುಣ ಕ್ಷೇತ್ರದಲ್ಲಿ ಮೂರು ಪಕ್ಷಗಳಿಂದ ನಿಖರವಾದ ಅಭ್ಯರ್ಥಿಗಳ ಹೆಸರು ಪ್ರಕಟ ಆಗಿಲ್ಲ. ಕಾಂಗ್ರೆಸ್ ನಿಂದ ಹಾಲಿ ಶಾಸಕ, ಮಾಜಿ ಮುಖ್ಯಮಂತ್ರಿ ಪುತ್ರ ಯತೀಂದ್ರ ಸಿದ್ರಾಮಯ್ಯ ಅವರೇ ಕಣದಲ್ಲಿದ್ದಾರೆ. ಆದರೆ ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿ ರೇಸ್‌ನಲ್ಲಿರುವ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸುರಕ್ಷಿತವಾದ ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ಅಂತಹವರ ಕಣ್ಣಿಗೆ ಈಗ ಬಿದ್ದಿರುವುದು ವರುಣ ವಿಧಾನಸಭಾ ಕ್ಷೇತ್ರ. ಎಲ್ಲಾ ರಾಜಕೀಯ ಲೆಕ್ಕಾಚಾರಗಳು, ರಾಜಕೀಯ ಒಳ ತಂತ್ರಗಳು, ಮತಗಳ ವಿಭಜನೆ ವಿಚಾರದಲ್ಲಿ ಅಳೆದು ತೂಗಿ ಲೆಕ್ಕಾಚಾರ ಮಾಡಿರುವ ಸಿದ್ದರಾಮಯ್ಯ ವರುಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲು ಹೆಚ್ಚು ಒಲವನ್ನು ತೋರಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ದೇ ಆದರೆ ಯತೀಂದ್ರ ಸಿದ್ದರಾಮಯ್ಯ ಕೂಡ ತಮ್ಮ ಸ್ಥಾನವನ್ನು ಬಿಟ್ಟುಕೊಡಲು ರೆಡಿ ಇದ್ದಾರೆ. ಯಾವಾಗ ಸಿದ್ದರಾಮಯ್ಯ ವರುಣ ಕ್ಷೇತ್ರದಲ್ಲಿ ಸ್ಪರ್ಧಿಸುವ ವಿಚಾರ ಮುಂದೆ ಬಂತು‌ ಬಿಜೆಪಿಯಲ್ಲಿ ಕೂಡ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಕಣಕ್ಕಿಳಿಸುವ ಮಾತುಗಳು ಕೇಳಿ ಬಂದಿವೆ. ಹೀಗಾದಾಗ ವೀರಶೈವ ಲಿಂಗಾಯಿತ ಮತಗಳ ದೃವೀಕರಣವಾಗಲಿದ್ದು ಬಿಜೆಪಿಯು ಸಿದ್ದರಾಮಯ್ಯ ವಿರುದ್ಧ ಪ್ರಬಲ ಹೋರಾಟ ನಡೆಸಿ ಗೆಲ್ಲಬಹುದು ಎಂಬ ಲೆಕ್ಕಾಚಾರ ಇಟ್ಟುಕೊಂಡಂತಿದೆ. 

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?