ಬಜರಂಗದಳ ಬ್ಯಾನ್: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಾಂಗ್ರೆಸ್‌ ನಾಯಕರು!

May 3, 2023, 7:50 PM IST

ಬೆಂಗಳೂರು (ಮೇ 3): ನಾವು ಆಂಜನೇಯ ಭಕ್ತರು. ಅವರು ಮಾತ್ರನಾ? ಶಾಂತಿ ತೋಟ ಕದಲಬಾರದು. ಸೌಹಾರ್ದತೆ‌ ಇರಬೇಕು. ಬಜರಂಗದಳ ಬ್ಯಾನ್ ಮಾಡ್ತೀವಿ ಅಂದ್ರೆ ಯಾಕೆ ಅವರು ಗಾಬರಿ ಆಗ್ತಿದ್ದಾರೆ. ಆಂಜನೇಯ ಗೂ ಭಜರಂಗದಳ ಕ್ಕೂ ಏನ್ ಸಂಬಂಧ...? ಬಿಜೆಪಿಯವರು ಬಹಳ ಪ್ರವೋಕ್ ಮಾಡ್ತಿದ್ದಾರೆ ಎಂದು ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಹೇಳಿದ ಕಾಂಗ್ರೆಸ್‌ ನಾಯಕರು ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ನಾವು ಕೂಡ ಆಂಜನೇಯ ಭಕ್ತರು. ಅವರು ಮಾತ್ರನಾ? ಶಾಂತಿ ತೋಟ ಕದಲಬಾರದು. ಸೌಹಾರ್ದತೆ‌ ಇರಬೇಕು. ಬಜರಂಗದಳ ಬ್ಯಾನ್ ಮಾಡ್ತೀವಿ ಅಂದ್ರೆ ಯಾಕೆ ಅವರು ಗಾಬರಿ ಆಗ್ತಿದ್ದಾರೆ. ಆಂಜನೇಯ ಗೂ ಭಜರಂಗದಳ ಕ್ಕೂ ಏನ್ ಸಂಬಂಧ...? ಬಿಜೆಪಿಯವರು ಜನರನ್ನು ಎತ್ತಿಕಟ್ಟುತ್ತಿರುವ ಬಗ್ಗೆ ಅರ್ಥ ಅಗಿದೆ. ಆಂಜನೇಯ ಬೇರೆ ಭಜರಂಗದಳ ಬೇರೆ. ಬಿಜೆಪಿ ಅವರು ಭಜರಂಗಿ ಅಂತ ಕ್ಯಾಂಪೇನ್ ಮಾಡೋದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾಳೆ ಕೆಲವರು  ಹನುಮ ಚಾಲಿಸ ಪಠಣೆ ಮಾಡಲು ಸಿದ್ಧರಾಗಿದ್ದಾರೆ. ಹನುಮ ಚಾಲಿಸ್ ನಾವು ದಿನ ಪಠಣ ಮಾಡ್ತೀವಿ. ಅವರೊಬ್ಬರೇನಾ ಮಾಡೋದು? ಹಿಂದಿನ  RSS ಬೇರೆ ಈಗಿನ RSS ಬೇರೆ. ನಮ್ಮ ಪ್ರಣಾಳಿಕೆಯಲ್ಲಿ ಬದಲಾವಣೆ ಇಲ್ಲ. ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿ ನೋಡಿಕೊಳ್ತೀರಾ.? ಮೊದಲು ನೀವು ದೇಶ ಉಳಿಸಿ. ನಮ್ಮ ಗ್ಯಾರಂಟಿ ಕಾರ್ಡ್ ಐತಿಹಾಸಿಕ. ನಮ್ಮ ಗ್ಯಾರಂಟಿ ನಾವು ಕೊಟ್ಟೇ ಕೊಡ್ತೀವಿ. ಬಿಜೆಪಿ ಅವರು ಒಂದೊಂದು ವಿಷಯ ತೆಗೆದುಕೊಂಡು ಹೀಗೆ ಮಾಡ್ತಿದ್ದಾರೆ.. ಇದೆಲ್ಲ ವರ್ಕ್ ಆಗೊಲ್ಲ. ನಾನು ಹಿಂದು, ನಾನು ಆಂಜನೇಯ ಭಕ್ತ, ರಾಮನ ಭಕ್ತ. ಬಿಜೆಪಿಯವರು ಏನು ಬೇಕಾದರೂ ಮಾಡಿಕೊಳ್ಳಲಿ. ನಮಗೆ 141ಸೀಟು  ಬರೋದು ಪಕ್ಕಾ ಎಂದು ಹೇಳಿದರು.