Mar 20, 2022, 5:54 PM IST
ಮೈಸೂರು, (ಮಾ.20): ಗುಜರಾತ್‌ನಲ್ಲಿ 6ರಿಂದ 12ನೇ ತರಗತಿಯ ಪಠ್ಯದಲ್ಲಿ ಭಗವದ್ಗೀತೆ ಸೇರಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಇದರ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲೂ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಕುರಿತು ಚರ್ಚೆ ಆರಂಭವಾಗಿದೆ. ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗಿದ್ದು, ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿದೆ.
Schools Syllabus ಭಗವದ್ಗೀತೆಯನ್ನು ಪಾಠಮಾಡಿದರೆ ಮಕ್ಕಳ ಹೊಟ್ಟೆತುಂಬುತ್ತದೆಯೇ, ಬಿಜೆಪಿಗೆ ಹೆಚ್‌ಡಿಕೆ ಪ್ರಶ್ನೆ!
ಹೌದು...ಪಠ್ಯದಲ್ಲಿ ಭಗವದ್ಗೀತೆ ಸೇರಿಸುವ ಸಂಬಂಧ ಆಡಳಿತ ಪಕ್ಷದ ನಾಯಕ ಹಾಗೂ ವಿರೋಧ ಪಕ್ಷದ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಜೊರಾಗಿವೆ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.