ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಕೆಲ ರಾಜಕಾರಣಿಗಳು ಇದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದು, ಸಿಸಿಬಿ ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯೆ ಶಾಸಕ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ಕೊಟ್ಟಿದ್ದ, ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಕಲಬುರಗಿ, (ನ.10): ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಕೆಲ ರಾಜಕಾರಣಿಗಳು ಇದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದು, ಸಿಸಿಬಿ ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯೆ ಶಾಸಕ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ಕೊಟ್ಟಿದ್ದ, ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಬಿಟ್‌ಕಾಯಿನ್ ಕೇಸಲ್ಲಿ ಯಾರೆಲ್ಲಾ ಇದ್ದಾರೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ ಆರಗ!
ಕಲಬುರಗಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ತನಿಖೆ ಪಾರದರ್ಶಕವಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪದವಿ ಕಳೆದುಕೊಳ್ಳುತ್ತಾರೆ. ಬಿಜೆಪಿಯಲ್ಲಿ ಮೂರನೇ ಮುಖ್ಯಮಂತ್ರಿ ನೇಮಕವಾಗುತ್ತಾರೆ ಎಂಬ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.