ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. 2 ಪಟ್ಟಿ ಬಿಡುಗಡೆ ಬಳಿಕ ಬಂಡಾಯದ ಬೆಂಕಿ ಜೋರಾಗಿದೆ. 25 ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಬಂಡಾಯದ ಕಿಚ್ಚು ಹಚ್ಚಿದ್ದು, ಇದರಿಂದ ಇತರ ಪಕ್ಷಕ್ಕೆ ಲಾಭವಾಗುವ ಸಾಧ್ಯತೆ ದಟ್ಟವಾಗಿದೆ
ಬೆಂಗಳೂರು(ಏ.13): ಕರ್ನಾಟಕ ವಿಧಾನಸಭಾ ಚುನಾವಣೆ ಟಿಕೆಟ್ ಘೋಷಣೆ ಬಿಜೆಪಿ ಸಂಕಷ್ಟ ತೀವ್ರಗೊಳ್ಳುತ್ತಿದೆ. ಒಬ್ಬೊಬ್ಬ ನಾಯಕರು ರಾಜೀನಾಮೆ ನೀಡಿ ಇತರ ಪಕ್ಷಗಳತ್ತ ಮುಖ ಮಾಡಿದ್ದಾರೆ. ಮತ್ತೆ ಕೆಲವರು ಪಕ್ಷೇತ್ರರರಾಗಿ ಸ್ಪರ್ಧೆಗೆ ಸಜ್ಜಾಗಿದ್ದಾರೆ. 25 ಕ್ಷೇತ್ರದಲ್ಲಿ ಬಂಡಾಯದ ಭುಗಿಲೆದ್ದಿದೆ. ಬಿಜೆಪಿ ನಾಯಕರ ನಡೆಯಿಂದ ಇತರ ಪಕ್ಷಗಳಿಗೆ ಲಾಭವಾಗುವ ಎಲ್ಲಾ ಸಾಧ್ಯತೆ ಇದೆ. ಇಷ್ಟೇ ಅಲ್ಲ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬಿಜೆಪಿ ಬಂಡಾಯವನ್ನೇ ಬಂಡವಾಳ ಮಾಡಿಕೊಳ್ಳುಲು ಮುಂದಾಗಿದೆ.