ಈ ಬಾರಿಯ ಒಂದು ವಿಶೇಷತೆ ಎಂದರೆ, ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ವರಿಷ್ಠರು ಒಲವು ತೋರಿಲ್ಲ.ಡಿಸಿಎಂ ಹುದ್ದೆಯಿಂದ ಪಕ್ಷಕ್ಕಾಗಲಿ, ಸರ್ಕಾರಕ್ಕಾಗಲಿ ಹೆಚ್ಚಿನ ಅನುಕೂಲವೇನೂ ಆಗಿಲ್ಲ ಎಂಬ ಅಭಿಪ್ರಾಯವನ್ನು ವರಿಷ್ಠರು ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ಆ. 04): ಇಂದು ಮಧ್ಯಾಹ್ನ 2.15 ಕ್ಕೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿಯ ಒಂದು ವಿಶೇಷತೆ ಎಂದರೆ, ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ವರಿಷ್ಠರು ಒಲವು ತೋರಿಲ್ಲ. ಹಿಂದಿನ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಮೂವರು ಉಪಮುಖ್ಯಮಂತ್ರಿಗಳಿದ್ದರು.
ಆದರೆ, ಉಪಮುಖ್ಯಮಂತ್ರಿ ಹುದ್ದೆಯಿಂದ ಪಕ್ಷಕ್ಕಾಗಲಿ ಅಥವಾ ಸರ್ಕಾರಕ್ಕಾಗಲಿ ಹೆಚ್ಚಿನ ಅನುಕೂಲವೇನೂ ಆಗಿಲ್ಲ ಎಂಬ ಅಭಿಪ್ರಾಯವನ್ನು ವರಿಷ್ಠರು ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಈ ಸಲ ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಅನೇಕರು ಕಣ್ಣಿಟ್ಟಿದ್ದರಿಂದ ಯಾರಿಗೆ ನೀಡಿದರೂ ಅದು ಅಸಮಾಧಾನಕ್ಕೆ ಕಾರಣವಾಗಬಹುದು ಎಂಬ ಕಾರಣಕ್ಕೆ ಹುದ್ದೆಯ ಸೃಷ್ಟಿಯೇ ಬೇಡ ಎಂಬ ನಿಲುವಿಗೆ ಬರಲಾಯಿತು ಎಂದೂ ಹೇಳಲಾಗುತ್ತಿದೆ.