Apr 25, 2023, 9:46 PM IST
ಬೆಂಗಳೂರು (ಏ.25): ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಹೈಕಮಾಂಡ್ ವಿರುದ್ಧ ಸಿಡಿದೆದ್ದು ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಪ್ರತಿನಿಧಿಸುತ್ತಿರುವ ‘ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ’ವನ್ನು ಉಳಿಸಿಕೊಳ್ಳಲೇಬೇಕೆಂದು ಬಿಜೆಪಿ ಪಣ ತೊಟ್ಟಿದೆ. ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರನ್ನು ಗೆಲ್ಲಿಸಲು ಮತ್ತು ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ತಂತ್ರ ಹೂಡಿದೆ.
ಹುಬ್ಬಳ್ಳಿಯಲ್ಲಿ ಪ್ರತಿಕಾಗೋಷ್ಠಿ ನಡೆಸಿದ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಎಲ್ಲಾ ವಿಚಾರ ಗೊತ್ತಿದೆ. ಅವರಿಗೆ ಟಿಕೆಟ್ ಯಾಕೆ ನೀಡಿಲ್ಲ ಎಂಬ ಬಗ್ಗೆ ಕೂಡ ತಿಳಿಸಿದ್ದೇವೆ. ಅದನ್ನು ನಾವು ಬಹಿರಂಗ ಪಡಿಸುವುದಿಲ್ಲ. ಈ ಬಗ್ಗೆ ಜನರು ಕೇಳಿದರೆ ಅವರಿಗೆ ಉತ್ತರ ನೀಡ್ತೇವೆ ಎಂದು ಹೇಳಿದ್ದರು. ಈ ನಡುವೆ ಸವದಿ ಸೋಲಿಸಲು ಬಿಎಸ್‌ವೈ ಮತ್ತು ಬೊಮ್ಮಾಯಿಗೆ ಹೈಕಮಾಂಡ್ ಟಾಸ್ಕ್ ನೀಡಿದೆ. ಹುಬ್ಬಳ್ಳಿಯಲ್ಲಿ ಶೆಟ್ಟರ್ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಸೋಲಬೇಕು ಎಂದು ಅಮಿತ್ ಶಾ ಕರೆ ಕೊಟ್ಟಿದ್ದಾರಂತೆ.