ಕಾಂಗ್ರೆಸ್ ಸರ್ಕಾರ ಕಟ್ಟಿಹಾಕಲು ಬಿಜೆಪಿ ಕಸರತ್ತು: ಸದನದ ಹೊರಗೆ, ಒಳಗೆ ಕೇಸರಿ ಪಡೆ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರ ಕಟ್ಟಿಹಾಕಲು ಬಿಜೆಪಿ ಕಸರತ್ತು: ಸದನದ ಹೊರಗೆ, ಒಳಗೆ ಕೇಸರಿ ಪಡೆ ಪ್ರತಿಭಟನೆ

Published : Jul 04, 2023, 09:29 AM IST

ಸೋಮವಾರದಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದೆ. ಈ ಹಿನ್ನೆಲೆ ಇಂದಿನಿಂದ ಬಿಜೆಪಿ ಸದನದ ಹೊರಗೆ ಮತ್ತು ಒಳಗೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ.

ಬೆಂಗಳೂರು: ರಾಜ್ಯ ಸರ್ಕಾರವನ್ನು ಕಟ್ಟಿ ಹಾಕಲು ಬಿಜೆಪಿ ಕಾಂಗ್ರೆಸ್‌ನ ಗ್ಯಾರಂಟಿಗಳನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ಸದನದ ಹೊರಗೆ ಮತ್ತು ಒಳಗೆ ಎರಡೂ ಕಡೆ ಬಿಜೆಪಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತಯಾರಿ ಮಾಡಿಕೊಂಡಿದೆ. ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದೆ. ಈ ವೇಳೆ ಗ್ಯಾರಂಟಿ ಯೋಜನೆಗಳನ್ನು ಯತಾವತ್ತಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಲಿದ್ದಾರೆ. ಅಕ್ಕಿಯನ್ನು 10 ಕೆಜಿ ಕೊಡುತ್ತೇವೆ ಎಂದು ಹೇಳಿದ್ದು, ಇದರಲ್ಲಿ 5 ಕೆಜಿ ಕೇಂದ್ರ ಕೊಡುತ್ತಿದೆ. ಆದ್ರೆ ಸರ್ಕಾರ ಕೊಡುವ ಹಣದಿಂದ 10 ಕೆಜಿ ಅಕ್ಕಿ ಸಿಗುವುದಿಲ್ಲ. ಹಾಗಾಗಿ ಮಾರುಕಟ್ಟೆಯಲ್ಲಿ ಅಕ್ಕಿಗೆ ಇರುವ ದರದ ಹಣವನ್ನೇ ಜನರಿಗೆ ಕೊಡಿ ಎಂದು ಈಗ ಬಿಜೆಪಿ ಪಟ್ಟು ಹಿಡಿದಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ ಬಳಿಕ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ ಹೆಚ್ಚುವರಿ ಬಸ್‌ಗಳನ್ನು ಖರೀದಿಸಬೇಕು ಎಂದು ಬಿಜೆಪಿ ಆಗ್ರಹಿಸಲಿದೆ. ಇದರ ಜೊತೆಗೆ ವಿದ್ಯುತ್‌ ಬಿಲ್‌ ಏರಿಕೆಗೆ ಸಂಬಂಧಿಸಿದಂತೆ ಸಹ ಪ್ರತಿಭಟನೆ ನಡೆಸಲಿದೆ. 

ಇದನ್ನೂ ವೀಕ್ಷಿಸಿ:  ಹಾಡಹಗಲೇ ಯುವಕನ ಬರ್ಬರ ಹತ್ಯೆ: ಸ್ಥಳೀಯರ ಮೊಬೈಲ್‌ನಲ್ಲಿ ಭಯಾನಕ ದೃಶ್ಯ ಸೆರೆ

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more