ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಶ್ಲೋಕ ಹೇಳಿ ಬಿಜೆಪಿಗೆ ಟಾಂಗ್ ಕೊಟ್ಟಿದದಾರೆ.
ಮೈಸೂರು, (ಮಾ.20): ಕರ್ನಾಟಕದ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಕುರಿತು ಚರ್ಚೆ ಆರಂಭವಾಗಿದೆ. ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗಿದ್ದು, ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿದೆ.
ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆ ತುಂಬಿಸುತ್ತೆ: ಎಚ್‌ಡಿಕೆಗೆ ಸಿಂಹ ಟಾಂಗ್
ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಶ್ಲೋಕ ಹೇಳಿ ಬಿಜೆಪಿಗೆ ಟಾಂಗ್ ಕೊಟ್ಟಿದದಾರೆ. ಭಗವದ್ಗೀತೆಯನ್ನು ದೇಶದ ಜನರಿಗೆ ತಲುಪಿಸಿದ್ದು ಕಾಂಗ್ರೆಸ್, ರಾಜೀವ್ ಗಾಂಧಿ ರಾಮಾಯಣ, ಮಹಾಭಾರತ ಪ್ರಸಾರ ಮಾಡಿದ್ರು
ದೂರದರ್ಶನದ ಮೂಲಕ ದೇಶದ ಜನರಿಗೆ ತಲುಪಿಸಿದ್ರು ಎಂದು ಯದಾ ಯದಾ ಹಿ ಧರ್ಮಸ್ಯ ಶ್ಲೋಕ ವಾಚಿಸಿದರು.