Eshwarappa Saffron Flag Row: ಈಶ್ವರಪ್ಪ ರಾಷ್ಟ್ರಧ್ವಜ ಹೇಳಿಕೆ ಹಿನ್ನೆಲೆ, ತುರ್ತು ಸಭೆಗೆ ಮುಂದಾದ ಬಿಜೆಪಿ

Feb 20, 2022, 3:50 PM IST

ಬೆಂಗಳೂರು, (ಫೆ.20): ರಾಷ್ಟ್ರಧ್ವಜದ (Natinal flag) ವಿಚಾರವಾಗಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಕೊಟ್ಟ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈಶ್ವರಪ್ಪನವರ ಹೇಳಿಕೆ ಖಂಡಿಸಿ ಕಾಂಗ್ರೆಸ್ (Congress) ನಾಯಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 4ನೇ ದಿನಕ್ಕೆ ಕಾಲಿಟ್ಟಿದೆ. ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್​ ಧರಣಿ ನಡೆಸುತ್ತಿದೆ.  ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಫೆ.21ರ ಬೆಳಗ್ಗೆ 7 ಗಂಟೆಗೆ ಬೆಂಗಳೂರಿನಲ್ಲಿ ಬಿಜೆಪಿ ತುರ್ತು ಸಭೆ ನಡೆಸಲು ತೀರ್ಮಾನಿಸಿದೆ.  

National Flag Row ರಾಜೀನಾಮೆಗೆ ಪಟ್ಟು ಹಿಡಿದಿರುವ ವಿಚಾರದ ಬಗ್ಗೆ 13 ಸಾರಿ ಹೇಳಿದ್ದೇನೆ, ಈಶ್ವರಪ್ಪ ಟಾಂಗ್

ಹೈಕಮಾಂಡ್ ನಿರ್ದೇಶನದ ಮೇರೆಗೆ ಸಭೆ ನಿಗದಿಯಾಗಿದೆ. ರಾಜ್ಯವ್ಯಾಪಿ ಹೋರಾಟಕ್ಕೆ ಕಾಂಗ್ರೆಸ್ ಪ್ಲ್ಯಾನ್ ಮಾಡಿರುವ ಹಿನ್ನೆಲೆ ಮುಂದಿನ‌ ಕಾರ್ಯತಂತ್ರದ ಬಗ್ಗೆ ಬಿಜೆಪಿ ನಾಯಕರು ಚರ್ಚಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಸಿಎಂ ಬೊಮ್ಮಾಯಿ‌, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಬಿಎಸ್ವೈ, ಸಚಿವ ಈಶ್ವರಪ್ಪ ಸೇರಿದಂತೆ ರಾಜ್ಯದ ಬಿಜೆಪಿ ಪ್ರಮುಖರು ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.