ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ವಿರುದ್ಧ ಹಾಗೂ ಸ್ವಪಕ್ಷದ ಮುಖಂಡರ ವಿರುದ್ಧ ಆಗಾಗ್ಗೆ ಕೆಲ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ.
ವಿಜಯಪುರ, (ಡಿ.25): ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ವಿರುದ್ಧ ಹಾಗೂ ಸ್ವಪಕ್ಷದ ಮುಖಂಡರ ವಿರುದ್ಧ ಆಗಾಗ್ಗೆ ಕೆಲ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ನಡೆಗೆ ಕೇಂದ್ರದ ನಾಯಕ ಫುಲ್ ಗರಂ
ಇತ್ತೀಚೆಗಷ್ಟೇ ನೈಟ್ ಕರ್ಫ್ಯೂ ಹೇರಿಕೆ ವಿಚಾರವಾಗಿ ಬಹಿರಂಗವಾಗಿ ಸರ್ಕಾರದ ತೀರ್ಮಾನ ವಿರೋಧಿಸಿದ್ದರು. ಅಷ್ಟೇ ಅಲ್ಲದೇ, ಪಕ್ಷದ ನಾಯಕತ್ವ ವಿಚಾರವಾಗಿ ಮಾತನಾಡಿದ್ದರು. ಇದೀಗ ಸಂಕ್ರಮಣ ಬಳಿ ಉತ್ತರ ಕರ್ನಾಟಕಕ್ಕೆ ಉತ್ತರಾಯಣ ಆಗುತ್ತೆ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.