ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆ? ದೆಹಲಿಯಲ್ಲೇ ಬೀಡುಬಿಟ್ಟ ರಮೇಶ್ ಜಾರಕಿಹೊಳಿ

Oct 10, 2021, 4:32 PM IST

ಬೆಳಗಾವಿ, (ಅ.10): ನವೆಂಬರ್ ಮೊದಲ ವಾರದಲ್ಲಿ ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆ ಆಗಲಿದೆ ಎನ್ನಲಾಗುತ್ತಿದೆ. ಈ ಸುಳಿವು ಸಿಗುತ್ತಿದ್ದಂತೆ ಶಾಸಕ ರಮೇಶ್‌ ಜಾರಕಿಹೊಳಿ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. 

ಅತ್ತ ಸಿಎಂ ನಡ್ಡಾ ಭೇಟಿ, ಇತ್ತ ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಗುದ್ದಾಟ

ಹೌದು..ಸಿಎಂ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚಿಸಿ ಬಳಿದ ಕಳೆದ 3 ದಿನದಿಂದ ರಮೇಶ್ ಜಾರಕಿಹೊಳಿ‌ ದೆಹಲಿಯಲ್ಲಿ ಇದ್ದಾರೆ. ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.