ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಸ್ವರೂಪ ಬದಲಾಗಿ ಮತ್ತೆ ಮುಂದುವರೆದಿದೆ. ಸಚಿವ ಸ್ಥಾನ ವಂಚಿತರಿಗೆ ಹಾಗೂ ನಿರೀಕ್ಷೆಯ ಖಾತೆ ಸಿಗದವರು ದೆಹಲಿಗೆ ಎಡತಾಕುತ್ತಿದ್ದಾರೆ.
ಬೆಂಗಳೂರು (ಆ. 10): ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಸ್ವರೂಪ ಬದಲಾಗಿ ಮತ್ತೆ ಮುಂದುವರೆದಿದೆ. ಸಚಿವ ಸ್ಥಾನ ವಂಚಿತರಿಗೆ ಹಾಗೂ ನಿರೀಕ್ಷೆಯ ಖಾತೆ ಸಿಗದವರು ದೆಹಲಿಗೆ ಎಡತಾಕುತ್ತಿದ್ದಾರೆ.
ಸದ್ಯ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಉಳಿದಿವೆ. ಹೀಗಾಗಿ ಇವುಗಳ ಮೇಲೆ ಕಣ್ಣು ಹಾಕಿರುವ ಅಸಮಾಧಾನಿತ ಮುಖಂಡರು ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮುಂದುವರೆಸಿದ್ದಾರೆ. ಸಂಪುಟ ರಚನೆಯಾದರೂ ಅಸಮಾಧಾನ ತಣ್ಣಗಾಗದೇ ಇರುವುದು ಸಿಎಂ ಬೊಮ್ಮಾಯಿಗೆ ದೊಡ್ಡ ತಲೆನೋವಾಗಿದೆ.