ಏಪ್ರಿಲ್- ಮೇನಲ್ಲಿ ನಡೆಯಲಿರುವ ತಮಿಳುನಾಡಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಪುಟಿದೇಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ‘ಕಲೈನರ್ ಡಿಎಂಕೆ’ ಅಥವಾ ‘ಕೆಡಿಎಂಕೆ’ ಎಂಬ ಪಕ್ಷವನ್ನು ಅವರು ಸ್ಥಾಪಿಸುವ ಸಾಧ್ಯತೆ ಇದೆ.
ಬೆಂಗಳೂರು (ನ. 20): ಏಪ್ರಿಲ್- ಮೇನಲ್ಲಿ ನಡೆಯಲಿರುವ ತಮಿಳುನಾಡಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಪುಟಿದೇಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ‘ಕಲೈನರ್ ಡಿಎಂಕೆ’ ಅಥವಾ ‘ಕೆಡಿಎಂಕೆ’ ಎಂಬ ಪಕ್ಷವನ್ನು ಅವರು ಸ್ಥಾಪಿಸುವ ಸಾಧ್ಯತೆ ಇದೆ.
67 ಸಾವಿರ ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಚೆನ್ನೈಗೆ ಭೇಟಿ ನೀಡುತ್ತಿದ್ದಾರೆ. ಆ ಸಂದರ್ಭದಲ್ಲಿ ಅಳಗಿರಿ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿ ಮುಖಾಮುಖಿ ಮಾತುಕತೆ ನಡೆಸಲಿದ್ದಾರೆ.
ತಮಿಳುನಾಡಿನಲ್ಲಿ ಬೇರು ಬಿಡಲು ಯತ್ನಿಸುತ್ತಿರುವ ಬಿಜೆಪಿ ಈಗಾಗಲೇ ಪ್ರಸಿದ್ಧ ಚಿತ್ರನಟಿ ಖುಷ್ಬೂ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆಯುತ್ತಿರುವುದು ಸಂಚಲನಕ್ಕೆ ಕಾರಣವಾಗಿದೆ.