Apr 13, 2023, 10:34 PM IST
ಬೆಂಗಳೂರು (ಏ.13): ಕಾಂಗ್ರೆಸ್ ಹಾಗೂ ಜೆಡಿಎಸ್‌ಗಿಂತ ತಡವಾಗಿ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿದರೂ, ಬಿಜೆಪಿ ಪಾಲಿಗೆ ಈಗ ಉಳಿದುಕೊಂಡಿರುವುದು 12 ಕ್ಷೇತ್ರಗಳ ಟಿಕೆಟ್ ಮಾತ್ರ. ಈ ಕ್ಷೇತ್ರಗಳಿಗೆ ಹೊಸಬರನ್ನು ಆಯ್ಕೆ ಮಾಡುವ ಗುರಿಯಲ್ಲಿ ಹೈಕಮಾಂಡ್ ಇದೆ.
ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ-ಸೆಂಟ್ರಲ್ ವಿಧಾನಸಭಾ ಕ್ಷೇತ್ರಕ್ಕೆ ಮಹೇಶ್ ತೆಂಗಿನಕಾಯಿ ಅವರ ಹೆಸರು ಫೈನಲ್ ಆಗುವ ಸಾಧ್ಯತೆ ಇದೆ. ಕೋರ್ ಕಮಿಟಿ ಸಭೆಯಲ್ಲಿ ಜಗದೀಶ್ ಶೆಟ್ಟರ್ ಕೂಡ ಇವರ ಹೆಸರನ್ನೇ ಶಿಫಾರಸು ಮಾಡಿದ ಬಳಿಕ ಅವರಿಗೆ ಟಿಕೆಟ್ ಸಿಗುವುದು ಹೆಚ್ಚೂ ಕಡಿಮೆ ಖಚಿತವಾಗಿದೆ.
Party Rounds: ಬಿಜೆಪಿ ಮೂರನೇ ಪಟ್ಟಿಯಲ್ಲೂ ಹಿರಿಯರಿಗೆ ಟಿಕೆಟ್ ಡೌಟು!
ಶಿವಮೊಗ್ಗ ನಗರದಲ್ಲಿ ಕಾಂತೇಶ್ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಎನ್ನಲಾಗಿದ್ದರೂ, ಹೈಕಮಾಂಡ್ ಬೇರೆಯೇ ನಿರ್ಧಾರ ತಳೆಯುವ ಸಾಧ್ಯತೆ ಇದೆ. ಈಶ್ವರಪ್ಪ ನಿವೃತ್ತಿ ಬೆನ್ನಲ್ಲಿಯೇ ಈ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಸಿಗುತ್ತದೆ ಅನ್ನೋದೇ ಕುತೂಹಲಕ್ಕೆ ಕಾರಣವಾಗಿದೆ.