ಯಡಿಯೂರಪ್ಪ ಟಿಕೆಟ್‌ ಬಾಂಬ್- ಬಿಜೆಪಿಯಲ್ಲಿ ಭಾರಿ ಕಂಪನ: ಟಿಕೆಟ್‌ ಭಾಗ್ಯ ಇಲ್ಲದ ಶಾಸಕರು ಇವರೆನಾ?

ಯಡಿಯೂರಪ್ಪ ಟಿಕೆಟ್‌ ಬಾಂಬ್- ಬಿಜೆಪಿಯಲ್ಲಿ ಭಾರಿ ಕಂಪನ: ಟಿಕೆಟ್‌ ಭಾಗ್ಯ ಇಲ್ಲದ ಶಾಸಕರು ಇವರೆನಾ?

Published : Mar 08, 2023, 02:22 PM IST

ಬಿಜೆಪಿಯಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದಾರೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ನೀಡಿರುವ ಹೇಳಿಕೆ ಬಿಜೆಪಿ ಶಾಸಕರಲ್ಲಿ ಭಾರಿ ಕಂಪನ ಸೃಷ್ಟಿಸಿದೆ.

ಕಲಬುರಗಿ (ಮಾ.08):  ಬಿಜೆಪಿಯಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದಾರೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಬಿಜೆಪಿ ಪರ ಅಲೆ ಜೋರಾಗಿದೆ. 140ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದರು.

ಟಿಕೆಟ್‌ ಹಂಚಿಕೆ ವಿಷಯದಲ್ಲಿಯೂ ಕಟ್ಟುನಿಟ್ಟಿನ ಮಾನದಂಡಗಳನ್ನು ಅನುಸರಿಸಲಾಗುವುದು. ಟಿಕೆಟ್‌ ಹಂಚಿಕೆಯಲ್ಲಿ ಗುಜರಾತ್‌ ಮಾದರಿ ಅನ್ನೋದಕ್ಕಿಂತ ಪಕ್ಷದ ಹೈಕಮಾಂಡ್‌ ಹಾಲಿ ಶಾಸಕರೆಲ್ಲರ ಚಲನ ವಲನ ಗಮನಿಸುತ್ತಿದೆ. ಇದನ್ನಾಧರಿಸಿ ಹೇಳೋದಾದಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿಯ ಉಮೇದುವಾರರ ಮೊದಲ ಪಟ್ಟಿ ಶೀಘ್ರವೇ ಹೊರಬೀಳುತ್ತದೆ. ವಿಜಯೇಂದ್ರ ಯಾವ ಕ್ಷೇತ್ರದಿಂದ ಕಣಕ್ಕಿಳಿಯಬೇಕು ಎಂಬುದನ್ನು ಪಕ್ಷದ ಹೈಕಮಾಡ್‌ ತೀರ್ಮಾನಿಸಲಿದೆ. ಬಹುಶ: ಈಗಿನ ಮಟ್ಟಿಗೆ ಶಿಕಾರಿಪುರದಿಂದಲೇ ಸ್ಪರ್ಧಿಸುವ ಸಾಧ್ಯತೆಗಳು ಅಧಿಕ ಎಂದು ಹೇಳಿದರು. ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಚುನಾವಣೆ ಮುಗಿದ ಬಳಿಕ ನಡೆಯುವ ಶಾಸಕಾಂಗ ಸಭೆಯಲ್ಲಿ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬ ನಿರ್ಧಾರವಾಗಲಿದೆ ಎಂದರು.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?