ಬಿಜೆಪಿಯಲ್ಲಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ್ ನೇರ ಕಾರಣ, ಶೆಟ್ಟರ್ ಗಂಭೀರ ಆರೋಪ!

ಬಿಜೆಪಿಯಲ್ಲಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ್ ನೇರ ಕಾರಣ, ಶೆಟ್ಟರ್ ಗಂಭೀರ ಆರೋಪ!

Published : Apr 18, 2023, 01:22 PM IST

ಬಿಜೆಪಿಯಲ್ಲಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ ಅವರೇ ನೇರ ಕಾರಣ ಎಂದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಗಂಭೀರ ಆರೋಪ‌ ಮಾಡಿದ್ದಾರೆ.

ಬೆಂಗಳೂರು (ಏ.18):  ಬಿಜೆಪಿಯಲ್ಲಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ ಅವರೇ ನೇರ ಕಾರಣ ಎಂದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಗಂಭೀರ ಆರೋಪ‌ ಮಾಡಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಂತೋಷ ಅವರು ತಮ್ಮ ಮಾನಸ ಪುತ್ರ ಮಹೇಶ ತೆಂಗಿನಕಾಯಿಗೆ ಟಿಕೆಟ್ ನೀಡುವ ಸಲುವಾಗಿ ಪಕ್ಷವನ್ನು ಕಟ್ಟಿ ಬೆಳೆಸಿದರನ್ನ ಹೊರ ಹೋಗುವ ಪರಿಸ್ಥಿತಿಯನ್ನು ಪಕ್ಷದಲ್ಲಿ ಸೃಷ್ಟಿಸಲಾಗುತ್ತಿದೆ. ಈ ಹಿಂದೆ ಸಂತೋಷ ಅವರು ಪ್ರಚಾರ ಮಾಡಿದ, ಉಸ್ತುವಾರಿ ವಹಿಸಿಕೊಂಡ ರಾಜ್ಯಗಳು ಸೋತಿವೆ. ಆದರೂ ವರಿಷ್ಠರು ಈ ವಿಧಾನಸಭಾ ಚುನಾವಣೆಯಲ್ಲಿ ‌ರಾಜ್ಯದ ಉಸ್ತುವಾರಿ‌ ಏಕೆ ನೀಡಿದ್ದಾರೆ ಎನ್ನುವುದು ತಿಳಿಯುತ್ತಿಲ್ಲ.  ಟಿಕೆಟ್ ವಿಷಯದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ‌  ಬೊಮ್ಮಾಯಿ ಗಟ್ಟಿ‌ಯಾದ ನಿಲುವು ತಾಳಲಿಲ್ಲ. ಬಾಯಿ ಮಾತಲ್ಲ ವರಷ್ಠರೊಂದಿಗೆ ಮಾತನಾಡಿದ್ದೇನೆ ಅಂತ ಹೇಳಿದರು. ಧರ್ಮೆಂದ್ರ ಪ್ರಧಾನ್ ಅವರು ಕರೆ ಮಾಡಿ ಕ್ಷೇತ್ರದಲ್ಲಿ ಬೇರೆಯವರಿಗೆ ಟಿಕೆಟ್ ನೀಡಲಾಗುತ್ತಿದೆ. ಕೂಡಲೆ ಒಪ್ಪಿಗೆ ಪತ್ರಕ್ಕೆ ಸಹಿ ಮಾಡಿ ಕಳಿಸಿ ಅಂತಾ ಹೇಳುತ್ತಾರೆ. ಸೌಜನ್ಯಕ್ಕಾದರೂ ನನಗೆ ಯಾವ ಕಾರಣಕ್ಕೆ ಟಿಕೆಟ್ ನೀಡಲಾಗುತ್ತಿಲ್ಲ ಅನ್ನುವುದನ್ನ ಹೇಳಲಿಲ್ಲ. ಸಂತೋಷ ಅವರು ಅವರ ಮಾನಸಪುತ್ರನಿಗೆ ನೀಡಿದ ಪ್ರೀತಿಯಲ್ಲಿ ನನಗೆ 1% ನೀಡಿದ್ದರೆ ಈ ಬೆಳವಣಿಗಳು ಆಗುತ್ತಿರಲಿಲ್ಲ. ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ನಿಷ್ಟನಾಗಿ ಅವರು ನೀಡುವ ಜವಾಬ್ದಾರಿ ವಹಿಸಿಕೊಂಡು ಪಕ್ಷದ ಏಳ್ಗೆಗೆ ಶ್ರಮಿಸುವುದಾಗಿ ಶೆಟ್ಟರ್ ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more