ಕೋಲಾರದಲ್ಲಿ ಪಕ್ಷೇತರ ಅಭ್ಯರ್ಥಿ ಮೇಲೆ ಮಾಟ ಮಂತ್ರ: ಪ್ರಯೋಗದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕೋಲಾರದಲ್ಲಿ ಪಕ್ಷೇತರ ಅಭ್ಯರ್ಥಿ ಮೇಲೆ ಮಾಟ ಮಂತ್ರ: ಪ್ರಯೋಗದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Published : May 09, 2023, 05:01 PM ISTUpdated : May 09, 2023, 05:07 PM IST

ಪಕ್ಷೇತರ ಅಭ್ಯರ್ಥಿ ಮೇಲೆ ಮಾಟ ಮಂತ್ರ ಪ್ರಯೋಗ.
ಮಾಲೂರು ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ ಕುಮಾರ್
ಮಾಟ ಮಂತ್ರ ಪ್ರಯೋಗದ ಸಿಸಿಟಿವಿ ದೃಶ್ಯ ಲಭ್ಯ

ಕೋಲಾರ: ಚುನಾವಣೆಗೆ ಒಂದು ದಿನ ಬಾಕಿ ಇರುವಾಗಲೇ, ಪಕ್ಷೇತರ ಅಭ್ಯರ್ಥಿ ಮೇಲೆ ಮಾಟ ಮಂತ್ರ ಪ್ರಯೋಗ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಲೂರು ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ ಕುಮಾರ್ ಅವರ ವೈಟ್ ಗಾರ್ಡನ್‌ನಲ್ಲಿರುವ ನಿವಾಸದಲ್ಲಿ ಮಾಟ ಮಂತ್ರ ಮಾಡಲಾಗಿದೆ. ತಮಿಳುನಾಡು ಮೂಲದ ವ್ಯಕ್ತಿಗಳು ಮಾಟ ಮಂತ್ರ ಮಾಡಿಸಿರುವ ಅನುಮಾನ ವ್ಯಕ್ತವಾಗಿದೆ. ಮನೆಯ ಕಾಂಪೌಂಡ್, ಮೇಲ್ಚಾವಣಿ ಹಾಗೂ ರಸ್ತೆಯಲ್ಲಿ ಮಾಟ ಮಂತ್ರದ ಕುರುಹುಗಳು ಪತ್ತೆಯಾಗಿವೆ. ಮೂರು ಕಡೆಗಳಲ್ಲಿ ಪ್ರತ್ಯೇಕವಾಗಿ ಮಾಟ ಮಂತ್ರವನ್ನು ಕಿಡಿಗೇಡಿಗಳು ಮಾಡಿಸಿದ್ದಾರೆ. ಎರಡು ಕಡೆಗಳಲ್ಲಿ ಬೊಂಬೆ,ನಿಂಬೆಹಣ್ಣು ಹಾಗೂ ಅರಿಶಿಣ, ಕುಂಕುಮ ಪತ್ತೆಯಾಗಿದೆ. ಮತ್ತೊಂದು ಕಡೆ ಮೂರು ಬ್ಯಾಗ್‌ಗಳಲ್ಲಿ ಮಾಟ ಮಂತ್ರದ ವಸ್ತುಗಳನ್ನು ಪತ್ತೆಯಾಗಿವೆ. ಮಾಟ ಮಂತ್ರ ಪ್ರಯೋಗದ ಸಿಡಿಟಿವಿ ದೃಶ್ಯ ಲಭ್ಯವಾಗಿದ್ದು, ಮಧ್ಯರಾತ್ರಿ 12 ಗಂಟೆಗೆ ಬಂದ ವ್ಯಕ್ತಿ ಈ ಕೃತ್ಯವೆಸಗಿದ್ದಾನೆ.ವ್ಯಕ್ತಿ ತಲೆಯ ಮೇಲೆ ಟವಲ್ ಹಾಕಿಕೊಂಡು ಮುಖವನ್ನು ಮುಚ್ಚಿಕೊಂಡಿದ್ದ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಚುನಾವಣೆ ಸೋಲಿನ ಬಳಿಕ ಮಂಡ್ಯದಿಂದಲೇ ದೂರವುಳಿದಿದ್ದ ರಮ್ಯಾ: ಈ ಬಾರಿ ಮತ ಹಾಕ್ತಾರಾ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more