Nov 28, 2022, 11:07 AM IST
ಇಂದು ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಲಿದ್ದು, ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜೊತೆ ಚರ್ಚೆ ನಡೆಸಲಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ದೆಹಲಿ ಭೇಟಿ ನಿಗದಿ ಬೆನ್ನಲ್ಲೇ, ಆಕಾಂಕ್ಷಿಗಳಿಗೆ ಟೆನ್ಷನ್ ಶುರುವಾಗಿದೆ. ಗುಜರಾತ್ ಚುನಾವಣೆ ಹಿನ್ನೆಲೆ ಹೈಕಮಾಂಡ್ ಸಿಗುವುದು ಡೌಟ್ ಇದ್ದು, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ದೆಹಲಿಯಲ್ಲಿ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಅವರನ್ನು ಭೇಟಿ ಮಾಡಲಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಸಚಿವರನ್ನೂ ಕಾಣುವ ನಿರೀಕ್ಷೆಯಿದೆ ಇದೆ.