ಸಿದ್ದು ಸರ್ಕಾರದ ನಡೆಯ ಹಿಂದಿದ್ಯಾ I.N.D.I.A. ಋಣ..? ವಿರೋಧದ ಮಧ್ಯೆಯೂ ರಾಜ್ಯ ಸರ್ಕಾರ ನೀರು ಬಿಟ್ಟದ್ದೇಕೆ..?

ಸಿದ್ದು ಸರ್ಕಾರದ ನಡೆಯ ಹಿಂದಿದ್ಯಾ I.N.D.I.A. ಋಣ..? ವಿರೋಧದ ಮಧ್ಯೆಯೂ ರಾಜ್ಯ ಸರ್ಕಾರ ನೀರು ಬಿಟ್ಟದ್ದೇಕೆ..?

Published : Aug 22, 2023, 02:23 PM IST

ಮತ್ತೆ ಧಗ ಧಗಿಸಿತು ಕಾವೇರಿ ಜಲಯುದ್ಧದ ಕಿಚ್ಚು..!
ಲೋಕಸಭಾ ಚುನಾವಣೆಗಾಗಿ ಈ ನಿರ್ಧಾರನಾ..?
ಕಾವೇರಿ ನೀರಿಗಾಗಿ ಬೀದಿಗಿಳಿದ ಕೇಸರಿ ಕಲಿಗಳು..!

ಕೆಆರ್‌ಎಸ್‌ ಡ್ಯಾಮ್‌ನಲ್ಲಿ ನೀರಿನ ಕೊರತೆಯ ನಡುವೆಯೂ ತಮಿಳುನಾಡಿಗೆ(Tamilnadu) ನೀರು ಬಿಟ್ಟಿರೋದನ್ನು ವಿರೋಧಿಸಿ ಸಕ್ಕರೆ ನಾಡಿನಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಒಂದ್ಕಡೆ ಬಿಜೆಪಿ(BJP) ನಾಯಕರ ಪ್ರತಿಭಟನೆ, ಮತ್ತೊಂದ್ಕಡೆ ರೈತ ಸಂಘ, ಕನ್ನಡ ಪರ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸುತ್ತಿವೆ. ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ನಿರ್ಧಾರವನ್ನು ಎಲ್ಲರೂ ಒಕ್ಕೊರಲಿನಿಂದ ವಿರೋಧಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಕಾವೇರಿ ನೀರು ಬಿಡುವ ವಿಚಾರದಲ್ಲಿ ತಮಿಳುನಾಡು ಸರ್ಕಾರ ಕಳೆದ 14ನೇ ತಾರೀಕಿನಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಬೆಳೆಗಳ ರಕ್ಷಣೆಗಾಗಿ ಪ್ರತಿ ದಿನ 24 ಸಾವಿರ ಕ್ಯೂಸೆಕ್ ಕಾವೇರಿ(Cauvery) ನದಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಅಂತ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಇದಕ್ಕೂ ಮೊದಲು ನಡೆದ ಕಾವೇರಿ ಪ್ರಾಧಿಕಾರದ ಸಭೆಯಲ್ಲೂ ಕ್ಯಾತೆ ತೆಗೆದಿದ್ದ ತಮಿಳುನಾಡು, 15 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಕರ್ನಾಟಕ(Karnataka) ಸರ್ಕಾರಕ್ಕೆ ಆದೇಶ ನೀಡುವಂತೆ ಪ್ರಾಧಿಕಾರವನ್ನು ಆಗ್ರಹಿಸಿತ್ತು. ಆದರೆ ಕಾವೇರಿ ನದಿಪಾತ್ರದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇರುವ ಕಾರಣ ನೀರು ಹರಿಸಲು ಸಾಧ್ಯವಿಲ್ಲ ಅಂತ ಪ್ರಾಧಿಕಾರದ ಮುಂದೆ ಕರ್ನಾಟಕ ಸರ್ಕಾರ ವಾದ ಮಂಡಿಸಿತ್ತು. ಇದಾದ ನಂತರ ತಮಿಳುನಾಡು ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದರಿಂದ  12,631 ನೀರು ಬಿಡಲಾಗಿದೆ.

ಇದನ್ನೂ ವೀಕ್ಷಿಸಿ:  ಪ್ರವಾಸದ ಹೊತ್ತಲ್ಲಿ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ: ಲಡಾಖ್ ಪ್ರವಾಸದ ಹಿಂದಿದೆಯಾ ರಾಜಕಾರಣ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more