Feb 19, 2021, 2:45 PM IST
ಬೆಂಗಳೂರು (ಫೆ. 19): ವೀರಶೈವ ಲಿಂಗಾಯತ, ಕುರುಬ, ವಾಲ್ಮೀಕಿ, ಒಕ್ಕಲಿಗ ಸೇರಿದಂತೆ ನಾನಾ ಸಮುದಾಯಗಳು ಮೀಸಲಾತಿ ವಿಚಾರವಾಗಿ ಸರ್ಕಾರದ ಮೇಲೆ ತೀವ್ರ ಒತ್ತಡ ತರುತ್ತಿರುವ ವಿಚಾರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಗಂಭೀರವಾಗಿ ಚರ್ಚಿಸಲಾಗಿದೆ. ಆತುರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಎಚ್ಚರಿಕೆ ಹೆಜ್ಜೆ ಇಡಲು ಸರ್ಕಾರ ತೀರ್ಮಾನಿಸಿದೆ.
'ಮೀಸಲಾತಿ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿದ್ದೇನೆ. ಸಚಿವರು ಕೂಡಾ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಚರ್ಚೆ ಮಾಡಿ ಮುಂದುವರೆಯುತ್ತೇವೆ' ಎಂದು ಸಿಎಂ ಪ್ರತಿಕ್ರಿಯಿಸಿದ್ದಾರೆ.