Jun 11, 2023, 10:38 AM IST
ಇಂದು ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಜಾರಿಗೊಳ್ಳಲಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಲಿದ್ದು, ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಕ್ತಿ ಯೋಜನೆ ಜಾರಿಗೆ ಕುಂದಾನಗರಿ ಬೆಳಗಾವಿಯ ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ರಾಜ್ಯದೆಲ್ಲೆಡೆ ಮಹಿಳೆಯರು ಸಂಸತ ವ್ಯಕ್ತಪಡಿಸಿದ್ದಾರೆ. ಕೂಲಿ, ಬಡ ಕಾರ್ಮಿಕ ಮತ್ತು ಬಡ ಮಹಿಳೆಯರಿಗೆ ಈ ಯೋಜನೆಯಿಂದ ಅನುಕೂಲ ಆಗಲಿದೆ. ಇನ್ನು ಬಸ್’ಗಳನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರಿಶೀಲಿಸಿದ್ದಾರೆ.