vuukle one pixel image

ಎಲ್ಲಾ 5 ಗ್ಯಾರಂಟಿ ಯೋಜನೆಗಳ ಜಾರಿ ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

May 31, 2023, 6:10 PM IST

 ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ  ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ  ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರ ಜತೆ ಮಾತನಾಡಿದ ಅವರು, ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತ ವಿವರಗಳನ್ನು ಸಲ್ಲಿಸಿದ್ದಾರೆತಿಳಿಸಿದರು.ಇನ್ನು ಸಭೆಯಲ್ಲಿ ಎಲ್ಲಾ ಅಧಿಕಾರಿಗಳು ಸೇರಿ ಒಟ್ಟಿಗೆ ಪ್ರೆಸೆಂಟೇಶನ್ ನೀಡಿದ್ದಾರೆ. ಎಲ್ಲಾ ಪ್ರಸ್ತಾವನೆಗಳು ಇಟ್ಟಕೊಂಡು, ಶುಕ್ರವಾರ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನ ಮಾಡುತ್ತೇವೆ. ಸರ್ಕಾರ 5 ಯೋಜನೆಗಳ ಜಾರಿಗೆ ತೀರ್ಮಾನ ಮಾಡಿದೆ ಎಂದು ತಿಳಿಸಿದರು.